Breaking News

ಹೈಕೋರ್ಟ್ ತಡೆಯಾಜ್ಞೆ ಅನ್ವಯ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್ ನ್ನು ಮುಂದೂಡಿದ ಕಾಲೇಜು ಶಿಕ್ಷಣ ಇಲಾಖೆ

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ಆಯ್ಕೆಗಾಗಿ ನಡೆಯಬೇಕಿದ್ದ ಕೌನ್ಸೆಲಿಂಗ್ ಅನ್ನು ಕಾಲೇಜು ಶಿಕ್ಷಣ ಇಲಾಖೆ ಮುಂದೂಡಿದೆ.
ಸಂಸ್ಕೃತ, ಚಿತ್ರಕಲಾ ಕಾಲೇಜುಗಳು ಸೇರಿದಂತೆ ರಾಜ್ಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಕಾಯಂ ಅಧ್ಯಾಪಕರಿಗೆ ಬೋಧನಾ ಕಾರ್ಯಭಾರ ಹಂಚಿಕೆ ಮಾಡಿದ ಬಳಿಕ ಉಳಿಯುವ ಕಾರ್ಯಭಾರಕ್ಕೆ ಅನುಗುಣವಾಗಿ 2024- 25 ನೇ ಸಾಲಿಗೆ ಅತಿಥಿ ಉಪನ್ಯಾಸಕರ ನೇಮಕ ಮಾಡಿಕೊಳ್ಳಲು ಜನವರಿ 2ರಂದು ಅರ್ಜಿ ಆಹ್ವಾನಿಸಲಾಗಿತ್ತು.
ವೇಳಾಪಟ್ಟಿಯ ಅನ್ವಯ ಅತಿಥಿ ಉಪನ್ಯಾಸಕರ ಆಯ್ಕೆ ಪ್ರಕ್ರಿಯೆ ಆರಂಭವಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿತ್ತು. ಸ್ಥಳ ಆಯ್ಕೆಗೆ ಕೌನ್ಸೆಲಿಂಗ್ ಬಾಕಿ ಇದ್ದು, ಹೈಕೋರ್ಟ್ ಧಾರವಾಡ ಪೀಠ ನೀಡಿದ ತಡೆಯಾಜ್ಞೆ ಅನ್ವಯ ಕಾಲೇಜು ಶಿಕ್ಷಣ ಇಲಾಖೆ ಅತಿಥಿ ಉಪನ್ಯಾಸಕರ ಕೌನ್ಸೆಲಿಂಗ್ ಮುಂದೂಡಿದೆ.
ಈಗಾಗಲೇ 2, 4 ಮತ್ತು 6ನೇ ಸೆಮಿಸ್ಟರ್ ತರಗತಿಗಳು ಆರಂಭವಾದ ಕಾರಣ ವಿದ್ಯಾರ್ಥಿಗಳ ಹಿತಾಸಕ್ತಿ ಗಮನದಲ್ಲಿಟ್ಟುಕೊಂಡು ಹೈಕೋರ್ಟ್ ನಿರ್ದೇಶನದ ಅನ್ವಯ ಯುಜಿಸಿ ನಿಯಮಗಳ ಪ್ರಕಾರ ಅತಿಥಿ ಉಪನ್ಯಾಸಕರ ನೇಮಕಾತಿ ಮಾಡಿಕೊಳ್ಳಲು ಕಾಲೇಜು ಶಿಕ್ಷಣ ಇಲಾಖೆಯ ವತಿಯಿಂದ ಆಹ್ವಾನಿಸಲಾಗಿತ್ತು. ಇದರಿಂದಾಗಿ ಅರ್ಹತೆ ಪಡೆಯದ 5000ಕ್ಕೂ ಅಧಿಕ ಅತಿಥಿ ಉಪನ್ಯಾಸಕರು ಅರ್ಜಿ ಸಲ್ಲಿಸಲು ಸಾಧ್ಯವಾಗಿರಲಿಲ್ಲ. ಅವಕಾಶ ವಂಚಿತ ಅತಿಥಿ ಉಪನ್ಯಾಸಕರು ನ್ಯಾಯಾಲಯದ ಮೊರೆ ಹೋಗಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *