Breaking News

ಜೈನ ಸಮುದಾಯದ ಅಭಿವೃದ್ದಿಗೆ ನಿಗಮ ಸ್ಥಾಪಿಸುವುದು ಖಚಿತ: ಡಿಸಿಎಂ ಡಿಕೆ ಶಿವಕುಮಾರ್

ಹುಬ್ಬಳ್ಳಿ: ಸತ್ಯ, ಧರ್ಮ, ಅಹಿಂಸೆ ಪರಮ ಧ್ಯೇಯವನ್ನಾಗಿ ಮಾಡಿಕೊಂಡಿರುವ ಜೈನ ಸಮಾಜದ ಅಭಿವೃದ್ಧಿಗೆ ನಿಗಮ ಸ್ಥಾಪಿಸುವುದು ಖಚಿತ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಭರವಸೆ ನೀಡಿದ್ದಾರೆ.
ಹುಬ್ಬಳ್ಳಿ ತಾಲೂಕಿನ ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ತೀರ್ಥಂಕರರ ಮಹಾಮಸ್ತಕಾಭಿಷೇಕ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಆಚಾರ್ಯ ಗುಣಧರನಂದಿ ಮಹಾರಾಜರು ಹಾಗೂ ಸಮಾಜದ ಹಿರಿಯರು ಜೈನ ಸಮಾಜ ಅಭಿವೃದ್ಧಿಗೆ ನಿಗಮ ಸ್ಥಾಪನೆಗೆ ಬೇಡಿಕೆ ಇಟ್ಟಿದ್ದು, ಇದಕ್ಕೆ ಸರ್ಕಾರದಿಂದ ಸಕಾರಾತ್ಮಕವಾಗಿ ಸ್ಪಂದಿಸಲಾಗುವುದು. ಬಜೆಟ್ ನಲ್ಲಿ ಜೈನ ಸಮಾಜ ಅಭಿವೃದ್ಧಿ ನಿಗಮ ಸ್ಥಾಪನೆ ಘೋಷಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ.

Share News

About Shaikh BigTv

Check Also

ಚಿನ್ನ ಖರೀದಿಸಲು ಬಂದವನಂತೆ ನಾಟಕವಾಡಿ ₹13 ಲಕ್ಷದ ಆಭರಣ ಎಗರಿಸಿದ ಖದೀಮ! ಕನ್ನಡಿಯಲ್ಲಿ ಮುಖ ನೋಡುತ್ತಲೇ ಮಾಲೀಕರಿಗೆ ಪಂಗನಾಮ

ಬೆಂಗಳೂರು: ಚಿನ್ನಾಭರಣ ಖರೀದಿಸುವ ನೆಪದಲ್ಲಿ ಜ್ಯುವೆಲ್ಲರಿ ಅಂಗಡಿಗೆ ಬಂದ ವ್ಯಕ್ತಿಯೊಬ್ಬ ₹13.20 ಲಕ್ಷ ಮೌಲ್ಯದ ಚಿನ್ನ ಕಳವು ಮಾಡಿದ್ದಾನೆ. ಪ್ರಕರಣಕ್ಕೆ …

Leave a Reply

Your email address will not be published. Required fields are marked *