Breaking News

ರಾಜ್ಯದಲ್ಲಿ ಲೈನ್ ಮನ್ ಹುದ್ದೆಗಳ ಭರ್ತಿಗೆ ಕ್ರಮ: ಸಚಿವ ಕೆ.ಜೆ.ಜಾರ್ಜ್

ವಿಜಯಪುರ: ರಾಜ್ಯದಲ್ಲಿ ಲೈನ್‌ಮನ್‌ಗಳ ಕೊರತೆ ಇದ್ದು, ಖಾಲಿ ಇರುವ ಹುದ್ದೆಗಳನ್ನು ತ್ವರಿತವಾಗಿ ಭರ್ತಿ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಏಪ್ರೀಲ್ ಒಳಗಾಗಿ ಖಾಲಿ ಇರುವ ಲೈನ್‌ಮನ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದೆಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಭರವಸೆ ನೀಡಿದರು.
ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಪ್ರಗತಿ ಪರಿಶೀಲನೆ ಸಭೆ ನಡೆಸಿದ ಅವರು, ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲರ ಆಗ್ರಹಕ್ಕೆ ಪೂರಕವಾಗಿ ಈ ಭರವಸೆ ನೀಡಿದರು.
ಲೈನ್‌ಮನ್‌ಗಳ ಸೇವೆ ಅನನ್ಯ. ಮಳೆಗಾಲದ ಸಂದರ್ಭ, ಪ್ರವಾಹ ಬಂದರೂ ನೆನೆದುಕೊಂಡು ಹೋಗಿ ವಿದ್ಯುತ್ ಸಮಸ್ಯೆಗೆ ಪರಿಹಾರ ಕಲ್ಪಿಸುತ್ತಿದ್ದಾರೆ. ಲೈನ್‌ಮನ್‌ಗಳ ಕಾರ್ಯ ಶ್ಲಾಘನೀಯ. ಇನ್ನಷ್ಟು ಹುದ್ದೆಗಳಿಗೆ ಭರ್ತಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆದಿದೆ ಎಂದರು.
ಸಂಸದ ರಮೇಶ ಜಿಗಜಿಣಗಿ, ಸಚಿವ ಶಿವಾನಂದ ಪಾಟೀಲ, ಶಾಸಕರಾದ ರಾಜುಗೌಡ ಪಾಟೀಲ ಕುದರಿಸಾಲೋಡಗಿ, ಶಾಸಕ ಅಶೋಕ ಮನಗೂಳಿ, ವಿಠಲ ಕಟಕದೊಂಡ ಮಾತನಾಡಿ, ಜಿಲ್ಲೆಯ ಹಾಗೂ ತಮ್ಮ ತಮ್ಮ ಕ್ಷೇತ್ರಗಳ ಸಮಸ್ಯೆಗಳ ಕುರಿತು ಸಚಿವರ ಗಮನ ಸೆಳೆದರು. ಜಿಲ್ಲಾಧಿಕಾರಿ ಟಿ.ಭೂಬಾಲನ್, ಸಿಇಒ ರಿಷಿ ಆನಂದ, ಕರ್ನಾಟಕ ಬಾಲ ವಿಕಾಸ ಅಕಾಡೆಮಿ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಮತ್ತಿತರರಿದ್ದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *