Breaking News

ಕೊಪ್ಪಳ; ಜಿಲ್ಲೆಯಲ್ಲಿ ಸ್ಥಾವರ ಸ್ಥಾಪನೆ ಅಂತಿಮವೇ ಆಗಿಲ್ಲ, ಆತಂಕವೂ ಬೇಡ: ಸಚಿವ ಶಿವರಾಜ ತಂಗಡಗಿ

ಕೊಪ್ಪಳ: ಜಿಲ್ಲೆಯಲ್ಲಿ ಪರಮಾಣು ವಿದ್ಯುತ್‌ ಸ್ಥಾವರ ಸ್ಥಾಪನೆ ಮಾಡಲಾಗುತ್ತಿದೆ ಎಂದು ಜನರನ್ನು ದಾರಿ ತಪ್ಪಿಸುವ ಕೆಲಸ ನಡೆಯುತ್ತಿದ್ದು, ಇದರಿಂದ ಯಾರೂ ಆತಂಕಕ್ಕೆ ಒಳಗಾಗುವುದು ಬೇಕಿಲ್ಲ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವರಾಜ ತಂಗಡಗಿ ಹೇಳಿದರು.
ನಗರದಲ್ಲಿ ಮಾತನಾಡಿದ ಅವರು ‘ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು ಮೇಲಿಂದ ಮೇಲೆ ಭೂಮಿಯಲ್ಲಿರುವ ಖನಿಜದ ಬಗ್ಗೆ ಮಾಹಿತಿ ಸಂಗ್ರಹಿಸುವ ಸಾಮಾನ್ಯ ಪ್ರಕ್ರಿಯೆ ನಡೆಸುತ್ತಿದ್ದಾರೆ.
ಪರಮಾಣು ಸ್ಥಾವರ ಸ್ಥಾಪನೆ ಅಂತಿಮವೇ ಆಗಿಲ್ಲ. ಒಂದು ವೇಳೆ ಅಂತಿಮವಾದರೂ ನಿಮ್ಮೆಲ್ಲರ ಜೊತೆ ನಾವಿರುತ್ತೇವೆ’ ಎಂದು ತಿಳಿಸಿದರು.
ಇದಕ್ಕೂ ಮೊದಲು ಸಾಹಿತಿ ಅಲ್ಲಮಪ್ರಭು ಬೆಟ್ಟದೂರು ‘ಕೊಪ್ಪಳ ತಾಲ್ಲೂಕಿನ ಅರಸನಕೇರಿಯಲ್ಲಿ ಪರಮಾಣು ವಿದ್ಯುತ್‌ ಸ್ಥಾವರ ಸ್ಥಾಪಿಸಲಾಗುತ್ತಿದ್ದು, ಎಲ್ಲ ಲೇಖಕರು ಇದನ್ನು ವಿರೋಧಿಸಿ ಧ್ವನಿ ಎತ್ತಬೇಕು’ ಎಂದು ಆಗ್ರಹಪಡಿಸಿದ್ದರು. ಆದ್ದರಿಂದ ಸಚಿವರು ಈ ಸ್ಪಷ್ಟನೆ ನೀಡಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *