ರಾಯಚೂರು: ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಜನವರಿ 24ರಂದು ನಡೆಯುವ ತ್ರೈಮಾಸಿಕ ಕೆ.ಡಿ.ಪಿ ಸಭೆಗೆ ಅಧಿಕಾರಿಗಳು ಸಮರ್ಪಕ ಮಾಹಿತಿಯೊಂದಿಗೆ ಬರಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ರಾಹುಲ್ ತುಕಾರಾಂ ಪಾಂಡ್ವೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ನಗರದ ಜಿಲ್ಲಾ ಪಂಚಾಯತಿಯ ಜಲ ನಿರ್ಮಲ ಸಭಾಂಗಣದಲ್ಲಿ ಜನವರಿ 22ರಂದು ನಡೆದ ವಿವಿಧ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾನಾಡಿದರು.
ಕೃಷಿ, ತೋಟಗಾರಿಕೆ, ಆರೋಗ್ಯ, ಪಶುಪಾಲನೆ, ರೇಷ್ಮೆ ಕೈಗಾರಿಕೆ, ಲೋಕೋಪಯೋಗಿ, ಸೇರಿದಂತೆ ಬೇರೆ ಬೇರೆ ಇಲಾಖೆಗಳಲ್ಲಿ ಅನುಷ್ಠಾನವಾದ ಕಾಮಗಾರಿಗಳು ಮತ್ತು ಟೆಂಡರ್ ಪ್ರಕ್ರಿಯೆಯ ಬಗ್ಗೆ ಅಧಿಕಾರಿಗಳು ಸಮರ್ಪಕ ಮಾಹಿತಿ ನೀಡಬೇಕು.
ಸಮಾಜ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಬಿಸಿಎಂ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಸತಿ ನಿಲಯಗಳ ಸಂಖ್ಯೆ, ಅಲ್ಲಿನ ಮಕ್ಕಳ ಸಂಖ್ಯೆ, ಮೂಲಭೂತ ಸೌಕರ್ಯಗಳ ಕೊರತೆ, ವಾರ್ಡನ್‍ಗಳ ಕೊರತೆಯ ಬಗ್ಗೆ ಕೇಳಿದಾಗ ಸಂಬಂಧಿಸಿದ ಜಿಲ್ಲಾಮಟ್ಟದ ಅಧಿಕಾರಿಗಳು ವಸ್ತುನಿಷ್ಠವಾದ ಮಾಹಿತಿ ನೀಡಬೇಕು ಎಂದು ತಿಳಿಸಿದರು.
ಡಾ:ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮ ನಿಯಮಿತ, ಕರ್ನಾಟಕ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ನಿಯಮಿತ, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕರ್ನಾಟಕ ಅಲ್ಪ ಸಂಖ್ಯಾತರ ಅಭಿವೃದ್ಧಿ ನಿಗಮ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೈಮಗ್ಗ ಮತ್ತು ಜವಳಿ ಇಲಾಖೆ, ಗ್ರಾಮೋದ್ಯೋಗ ಮತ್ತು ಸಣ್ಣ ಉದ್ಯಮಗಳು, ಖಾದಿ ಗ್ರಾಮೋದ್ಯೋಗ ಮಂಡಳಿ, ಹೈನುಗಾರಿಕೆ ಇಲಾಖೆ, ಸಹಕಾರ ಇಲಾಖೆ, ಯುವ ಜನಾ ಸೇವಾ ಮತ್ತು ಕ್ರೀಡಾ ಇಲಾಖೆ, ಮೀನುಗಾರಿಕೆ ಇಲಾಖೆ, ಕಸ್ಕರ್ಡ್ ಬ್ಯಾಂಕ್, ಕರ್ನಾಟಕ ರಾಜ್ಯ ಹಣಕಾಸು ಸಂಸ್ಥೆ,ಕರ್ನಾಟಕ ಗ್ರಾಮೀಣ ರಸ್ತೆ ಅಭಿವೃದ್ಧಿ ಸಂಸ್ಥೆ, ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಗಮ, ಪಂಚಾಯತ್ ರಾಜ್ ಎಂಜಿನಿಯರಿಂಗ್ ವಿಭಾಗ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳ ಚರಂಡಿ ಮಂಡಳಿ ಉಪ-ವಿಭಾಗ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಯ ಇಲಾಖೆ, ಕರ್ನಾಟಕ ಕೊಳಗೇರಿಅಭಿವೃದ್ಧಿ ಮಂಡಳಿ, ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ, ಸ್ವಚ್ಚ ಭಾರತ ಮಿಷನ್, ಜೆಸ್ಕಾಂ ಇಲಾಖೆ ಮತ್ತು ಜಿಲ್ಲಾ ಕೈಗಾರಿಕಾ ಇಲಾಖೆಗಳ ಅಧಿಕಾರಿಗಳೊಂದಿಗೆ ಸಿಇಓ ಅವರು ಮಾತನಾಡಿ ಆಯಾ ಇಲಾಖೆಯ ಯೋಜನೆಗಳ ಅನುಷ್ಠಾನದ ಬಗ್ಗೆ ಸರಿಯಾದ ಮಾಹಿತಿಯೊಂದಿಗೆ ಹಾಜರಾಗಲು ಸೂಚನೆ ನೀಡಿದರು.
ಇದೇ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಯೋಜನಾಧಿಕಾರಿ ಡಾ.ಟಿ.ರೋಣಿ, ಜಿಲ್ಲಾ ಕೈಗಾರಿಕಾ ಅಧಿಕಾರಿ ಬಸವರಾಜ ಯರಕಂಚಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಂಗಮೇಶ, ಗ್ರಾಮೀಣ ಕುಡಿಯುವ ನೀರು ನೈಮಲ್ಯ ಇಲಾಖೆಯ ವೆಂಕಟೇಶ ಗಲಗ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಈರೇಶ ನಾಯಕ, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕರಾದ ಪ್ರಶಾಂತ ಸೇರಿದಂತೆ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಇದ್ದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

