Breaking News

ಕರ್ನಾಟಕದಲ್ಲಿನ ಮಾದರಿ ಶಾಲೆಗಳಿಗೂ ಕೆಇಎಯಿಂದಲೇ ಪ್ರವೇಶ ಪರೀಕ್ಷೆ

ಬೆಂಗಳೂರು: ರಾಜ್ಯದಲ್ಲಿನ 12 ಏಕಲವ್ಯ ಮಾದರಿ ಶಾಲೆಗಳಿಗೆ 6ನೇ ತರಗತಿಯ ದಾಖಲಾತಿಯ ಪ್ರವೇಶ ಪರೀಕ್ಷೆ ನಡೆಸುವ ಹೊಣೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ವಹಿಸಲಾಗಿದೆ.
ಪ್ರವೇಶ ಪರೀಕ್ಷೆ ಫೆ. 15ಕ್ಕೆ ನಿಗದಿಯಾಗಿದ್ದು, ಜನವರಿ 25ರೊಳಗೆ ಅರ್ಜಿ ಸಲ್ಲಿಸುವಂತೆ ಸೂಚಿಸಲಾಗಿದೆ.
ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ, ಅಟಲ್‌ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾ ಗಾಂಧಿ, ಡಾ.ಬಿ.ಆರ್‌.ಅಂಬೇಡ್ಕರ್‌ ಮುಂತಾದ ವಸತಿ ಶಾಲೆಗಳಿಗೆ ಕೆಇಎಯೇ ಪ್ರವೇಶ ಪರೀಕ್ಷೆ ನಡೆಸುತ್ತಿದ್ದು, ಇದೀಗ ಏಕಲವ್ಯ ಮಾದರಿ ಶಾಲೆಗಳಿಗೂ ಪ್ರವೇಶ ಪರೀಕ್ಷೆ ನಡೆಸುವಂತೆ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನೀಡಿರುವ ಸೂಚನೆಯಂತೆ ಪರೀಕ್ಷೆ ನಡೆಸಲಿದೆ.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *