Breaking News

ತೋಟದ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ: ಸಚಿವ ಕೆ.ಜೆ.ಜಾರ್ಜ್‌

ಬಾಗಲಕೋಟೆ: ತೋಟದಲ್ಲಿರುವ ರೈತರ ಮನೆಗಳಿಗೂ ನಿರಂತರ ಜ್ಯೋತಿ ಸಂಪರ್ಕ ಕಲ್ಪಿಸುವ ಚಿಂತನೆ ಇದೆಯೆಂದು ಇಂಧನ ಸಚಿವರಾದ ಕೆ.ಜೆ.ಜಾರ್ಜ್ ಹೇಳಿದರು.
ನೂತನ ಜಿಲ್ಲಾ ಪಂಚಾಯತ ಸಭಾ ಭವನದಲ್ಲಿ ಜರುಗಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈ ಭಾಗದಲ್ಲಿ ಕೃಷ್ಣಾ ಮೇಲ್ದಂಡೆ ಯೋಜನೆಯಿಂದ ಮುಳುಗಡೆಗೊಂಡ ಸಂತ್ರಸ್ತರು ತಮ್ಮ ತೋಟಗಳಲ್ಲಿ ಮನೆಗಳನ್ನು ಕಟ್ಟಿಕೊಂಡು ವಾಸಿಸುತ್ತಿದ್ದಾರೆ. ಆ ಮನೆಗಳಿಗೂ ನಿರಂತರ ಜ್ಯೋತಿ ಮೂಲಕ ವಿದ್ಯುತ್ ಸಂಪರ್ಕ ಅಗತ್ಯವಿದದೆ. ಈ ಬಗ್ಗೆ ಚರ್ಚಿಸಿ ಕ್ರಮವಹಿಸಲಾಗುವುದು,” ಎಂದು ತಿಳಿಸಿದರು.ತೋಟದ ಮನೆಗಳಿಗೆ ಸದ್ಯ 7 ಗಂಟೆ ತ್ರೀ ಫೇಸ್ ವಿದ್ಯುತ್ ಸರಬರಾಜು ಮಾಡಲಾಗುತ್ತಿದ್ದು, ಉಳಿದಂತೆ ಸಂಜೆ 6 ರಿಂದ ಬೆಳಗ್ಗೆ 6 ಗಂಟೆವರೆಗೆ ಸಿಂಗಲ್ ಫೇಸ್ ಓಪನ್ ಡೆಲ್ಟಾ ಮಾದರಿಯಲ್ಲಿ ವಿದ್ಯುತ್ ಪೂರೈಸಲಾಗುತ್ತಿದೆ,” ಎಂದು ತಿಳಿಸಿದರು.ರಾಜ್ಯದಲ್ಲಿ ಕಳೆದ ವರ್ಷದ ಬೇಸಿಗೆಯಲ್ಲಿ ಒಂದು ತಿಂಗಳು ಮಾತ್ರ ವಿದ್ಯುತ್ ಸಮಸ್ಯೆಯಿತ್ತು. ಆದರೂ ಜನರಿಗೆ ಹಾಗೂ ರೈತರಿಗೆ ಯಾವುದೇ ತೊಂದರೆಯಾಗದಂತೆ ನೋಡಿಕೊಳ್ಳಲಾಯಿತು. ಪಂಜಾಬ್‌ ಹಾಗೂ ಉತ್ತರ ಪ್ರದೇಶಗಳ ಜತೆ ವಿದ್ಯುತ್‌ ವಿನಿಮಯ ಒಪ್ಪಂದ ಮಾಡಿಕೊಳ್ಳಲಾಗಿತ್ತು. ಮುಂಬರುವ ಬೇಸಿಗೆಯಲ್ಲೂ ಜನರಿಗೆ ವಿದ್ಯುತ್ ಪೂರೈಸಲು ಇಲಾಖೆ ಸನ್ನದ್ದವಾಗಿದೆ,” ಎಂದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *