Breaking News

ರಾಜ್ಯದಲ್ಲಿ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳ ಸಕ್ರಮ: ಸಚಿವ ಜಾರ್ಜ್

ವಿಜಯಪುರ: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ 2.5 ಲಕ್ಷ ಅಕ್ರಮ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದ್ದು, ಬಾಕಿ ಇರುವ 2 ಲಕ್ಷ ಪಂಪ್ ಸೆಟ್ ಗಳನ್ನು ಇನ್ನೊಂದು ವರ್ಷದಲ್ಲಿ ಸಕ್ರಮಗೊಳಿಸಲಾಗುವುದು ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್ ಹೇಳಿದ್ದಾರೆ.
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯ ಜನಪ್ರತಿಧಿಗಳು ಹಾಗೂ ಇಲಾಖೆ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಮಾತನಾಡಿದ ಅವರು, “ಅಕ್ರಮ ಪಂಪ್ ಸೆಟ್ ಗಳ ಸಕ್ರಮ ಯೋಜನೆ 2004ರಿಂದಲೇ ಜಾರಿಯಲ್ಲಿದ್ದು, ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಾಗ ಈ ಯೋಜನೆಯಡಿ 4.5 ಲಕ್ಷ ಅರ್ಜಿಗು ಬಾಕಿ ಇದ್ದವು. ಪ್ರಸ್ತುತ 2.5 ಲಕ್ಷ ಪಂಪ್ ಸೆಟ್ ಗಳನ್ನು ಅಕ್ರಮಗೊಳಿಸಲಾಗಿದೆ. ಬಾಕಿ ಉಳಿದ ಅರ್ಜಿಗಳನ್ನು ಇತ್ಯರ್ಥಗೊಳಿಸಿದ ಬಳಿಕ ಹೊಸದಾಗಿ ಬಂದ ಅರ್ಜಿಗಳ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾ ಕೈಗೊಳ್ಳಲಾಗುವುದು ಎಂದರು.
ರೈತರಿಗೆ ನಿರಂತರ 7 ಗಂಟೆ ಸೇರಿದಂತೆ ರಾಜ್ಯದ ಜನರಿಗೆ ದಿನದ 24 ಗಂಟೆಗಳ ಕಾಲ ವಿದ್ಯುತ್‌ ಪೂರೈಸಲಾಗುತ್ತಿದೆ.ವಿಜಯಪುರ ಜಿಲ್ಲೆಯಲ್ಲಿ 353 ಕೃಷಿ ಮಾರ್ಗಗಳಿಗೆ ಹಗಲು ವೇಳೆ 7 ಗಂಟೆ 3 ಫೇಸ್, 165 ಮಾರ್ಗಗಳಲ್ಲಿ ಹಗಲು 4 ಗಂಟೆ ರಾತ್ರಿ 3 ಮೂರು ಗಂಟೆಗಳ ಕಾಲ , 42 ಕೃಷಿ ಮಾರ್ಗದಲ್ಲಿ ಹಗಲು 3 ಮತ್ತು ರಾತ್ರಿ 4 ಗಂಟೆಗಳ ಕಾಲ ತ್ರೀ ಫೇಸ್ ಹಾಗೂ 43 ಕೃಷಿ ಮಾರ್ಗಗಳಲ್ಲಿ ಹಗಲು 3 ಗಂಟೆ ರಾತ್ರಿ 3 ಗಂಟೆಗಳ ಕಾಲ ತ್ರೀ ಫೇಸ್ ವಿದ್ಯುತ್ ಪೂರೈಕೆ ಮಾಡಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದರು.
ರಾಜ್ಯದಲ್ಲಿ ಕುಸುಮ್-ಬಿ ಯೋಜನೆಯಡಿ ರೈತರಿಗೆ ಶೇ. 80ರ ಸಬ್ಸಿಡಿ ದರದಲ್ಲಿ ಸೋಲಾರ್ ಪಂಪ್ ಸೆಟ್ ಒದಗಿಸುವುದು ಮತ್ತು ಕುಸುಮ್‌- ಸಿ ಯೋಜನೆಯಡಿ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಪೂರೈಸುವ ಫೀಡರ್ ಗಳ ಸೋಲರೈಸೇಷನ್ ಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ಅಂತರದಲ್ಲಿರುವ ಕೃಷಿ ಪಂಪ್ ಸೆಟ್ ಗಳನ್ನು ಸೋಲಾರ್ ವಿದ್ಯುತ್ ಪಂಪ್ ಸೆಟ್ ಗಳಾಗಿ ಪರಿವರ್ತಿಸಲಾಗುತ್ತಿದೆ. ಇದರಿಂದ ರೈತರಿಗೆ ಹೆಚ್ಚಿನ ಅನುಕೂಲಗಳಾಗಿವೆ ಎಂದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *