Breaking News

ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರಲ್ಲ: ಸಚಿವ ಜಾರ್ಜ್

ಬಾಗಲಕೋಟೆ : ರಾಜ್ಯದಲ್ಲಿ ಈ ಬಾರಿ ಬೇಸಿಗೆಯಲ್ಲಿ ಲೋಡ್ ಶೆಡ್ಡಿಂಗ್ ಇರಲ್ಲ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಹೇಳಿದರು.
ಬಾಗಲಕೋಟೆಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ರಾಜ್ಯದಲ್ಲಿ ಬರಗಾಲ ಬಂದಾಗಲೇ ಲೋಡ್ ಶೆಡ್ಡಿಂಗ್ ಮಾಡಿರಲಿಲ್ಲ. ಹಾಗಾಗಿ ಈ ವರ್ಷ ಲೋಡ್ ಶೆಡ್ಡಿಂಗ್ ಮಾಡಲ್ಲ ಎಂದು ಹೇಳಿದರು.
ವಿದ್ಯುತ್ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ ಸದ್ಯಕ್ಕೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ. ಒಂದು ವೇಳೆ ವಿದ್ಯುತ್ ಕೊರತೆ ಉಂಟಾದರೆ ಬೇರೆ ಕಡೆಯಿಂದ ವಿದ್ಯುತ್ ತರಿಸುತ್ತೇವೆ. ಈ ವರ್ಷ ಕೂಡ ಬೇಡಿಕೆ ಜಾಸ್ತಿಯಾಗಿದೆ ಎಂದರು.ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಕೆ ಮಾಡಲು ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಸಮರ್ಪಕ ವಿದ್ಯುತ್ ಪೂರೈಕೆಗಾಗಿ ವಿತರಣೆಯಲ್ಲಿ ಯಾವುದೇ ಸಮಸ್ಯೆ ಆಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದ್ದು, ಈ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ ಎಂದು ಸಚಿವ ಜಾರ್ಜ್ ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *