Breaking News

ಕೆಎಎಸ್ ಮರುಪರೀಕ್ಷೆ: ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿಗೊಳಿಸಿದ ಹೈಕೋರ್ಟ್

ಬೆಂಗಳೂರು: ಗೆಜೆಟೆಡ್‌ ಪ್ರೊಬೇಷನರ್ (ಕೆಎಎಸ್‌) ಅಧಿಕಾರಿಗಳ 384 ಹುದ್ದೆಗಳ ನೇಮಕಕ್ಕೆ 2024ರ ಡಿಸೆಂಬರ್‌ 29ರಂದು ನಡೆಸಲಾಗಿದ್ದ ಮರು ಪರೀಕ್ಷೆಯನ್ನು ರದ್ದುಪಡಿಸಿ ಮತ್ತೂಮ್ಮೆ ಪರೀಕ್ಷೆ ನಡೆಸುಂತೆ ಆದೇಶಿಸಬೇಕು ಎಂದು ಕೋರಿ ಸಲ್ಲಿಸಲಾದ ಅರ್ಜಿ ಸಂಬಂಧ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ನೋಟಿಸ್‌ ಜಾರಿಗೊಳಿಸಿದೆ.
ಈ ವಿಚಾರವಾಗಿ ಅಖಿಲ ಕರ್ನಾಟಕ ರಾಜ್ಯ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷ ಕಾಂತಕುಮಾರ್‌ ಸಲ್ಲಿಸಿದ್ದ ತಕರಾರು ಅರ್ಜಿಯನ್ನು ನ್ಯಾಯಮೂರ್ತಿ ಆರ್‌. ದೇವದಾಸ್‌ ಅವರಿದ್ದ ಏಕಸದಸ್ಯ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು. ಅರ್ಜಿ ಆಲಿಸಿದ ನ್ಯಾಯಪೀಠ ಬಳಿಕ ರಾಜ್ಯ ಸರಕಾರ, ಕರ್ನಾಟಕ ಲೋಕಸೇವಾ ಆಯೋಗ, ಗೃಹ ಇಲಾಖೆ ಸೇರಿ ಎಲ್ಲ ಪ್ರತಿವಾದಿಗಳಿಗೆ ನೋಟಿಸ್‌ ಜಾರಿಗೊಳಿಸಿ ವಿಚಾರಣೆಯನ್ನು ಜ. 30ಕ್ಕೆ ಮುಂದೂಡಿತು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *