Breaking News

ಬೆಂಗಳೂರು ಅರಮನೆ ಜಾಗಕ್ಕೆ ಸಂಬಂಧಪಟ್ಟ ದಾಖಲೆಗಳು ನನ್ನ ಬಳಿ ಇವೆ: ಪ್ರಮೋದಾದೇವಿ ಒಡೆಯರ್

ಮೈಸೂರು: ಬೆಂಗಳೂರು ಅರಮನೆ ಮೈದಾನ ಜಾಗಕ್ಕೆ ಈಗಾಗಲೇ ನ್ಯಾಯಾಲಯದ ತಡೆಯಾಜ್ಞೆ ಇದೆ. ಅಲ್ಲದೇ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಬೇಕೆಂದು ಸಹ ಹೇಳಲಾಗಿದೆ. ಇದಕ್ಕೆ ಸಂಬಂಧಪಟ್ಟ ದಾಖಲೆಗಳು ನನ್ನ ಬಳಿ ಇವೆ ಎಂದು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್‌ ತಿಳಿಸಿದರು.
ಬೆಂಗಳೂರು ಅರಮನೆ ಮೈದಾನ ಜಾಗಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಸುಗ್ರಿವಾಜ್ಞೆ ತರುವ ವಿಚಾರವಾಗಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯ ಸರಕಾರದ ಸಂಪುಟ ಸಭೆಯ ತೀರ್ಮಾನವನ್ನು ನೋಡಿದ್ದೇನೆ.
ಅರಮನೆ ಮೈದಾನದಲ್ಲಿ ಇಷ್ಟು ವರ್ಷ ನಡೆದ ಚಟುವಟಿಕೆಗಳು ಸರ್ಕಾರಕ್ಕೆ ಗೊತ್ತಿಲ್ಲದೇ ನಡೆದಿಲ್ಲ. ಯಾವುದೇ ಕಾರ್ಯಕ್ರಮವಾದರೂ ಸರ್ಕಾರಕ್ಕೆ ಗೊತ್ತಿರುತ್ತದೆ. 2014ರ ತೀರ್ಪಿನಲ್ಲಿ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್‌, ಐದು ಜನ ಅಕ್ಕ ತಂಗಿಯರು ಬೆಂಗಳೂರು ಅರಮನೆ ಪ್ರದೇಶದ ಮಾಲೀಕರು ಎಂದು ಹೇಳಿದೆ. ರಸ್ತೆ ವಿಸ್ತರಣೆಗೂ ನಮ್ಮ ಜಾಗ ಬಳಸಿಕೊಂಡಿದ್ದಾರೆ ಎಂದು ತಿಳಿಸಿದರು.
ಅರಮನೆಯನ್ನು ಯಾರೂ ಗುರಿಯಾಗಿಸಿಕೊಂಡಿದ್ದಾರೆ ಎನ್ನುವುದು ನಿಮಗೆಲ್ಲರಿಗೂ ಗೊತ್ತಿದೆ. ನಾವು ಯಾರಿಗೂ ತೊಂದರೆ ಕೊಟ್ಟಿಲ್ಲ. ನಮ್ಮನ್ನು ಟಾರ್ಗೆಟ್‌ ಮಾಡುತ್ತಿದ್ದಾರೆ. ಇದು ಹಲವು ವರ್ಷಗಳಿಂದ ನಡೆಯುತ್ತಿದೆ. ಕಾರಣ ಮಾತ್ರ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಅವರ ಹೆಸರನ್ನು ಹೇಳದೆ ಮಾರ್ಮಿಕವಾಗಿ ಮಾತನಾಡಿದರು. ಅರಮನೆ ಜಾಗದ ವಿಚಾರವಾಗಿ ಕಾನೂನು ಹೋರಾಟ ಮಾಡುತ್ತೇನೆ. 40 ವರ್ಷಗಳಿಂದ ಹೋರಾಟ ಮಾಡಿದ್ದೇನೆ. ಇಒಂದು ಕಲ್ಲು ಎಸೆದರೂ ಕೂಡಾ ನಾವು ಅದಕ್ಕೆ ಹೋರಾಟ ಮಾಡುತ್ತೇನೆಂದು ಹೇಳಿದರು.
ಕಾನೂನು ಸಚಿವರಿಗೆ ಮಾಹಿತಿ ಕೊರತೆ ಇಲ್ಲ ಎಂದು ನಾನು ಹೇಳುವುದಿಲ್ಲ. ಮೆಟ್ರೋ ಕಾಮಗಾರಿಗೆ ಜಾಗ ಬಳಸಿಕೊಂಡರೆ ಒಂದೂವರೆಯಷ್ಟು ಪರಿಹಾರ ಕೊಡುತ್ತಾರೆ. ನಮ್ಮ ಜಾಗಕ್ಕೆ ಪರಿಹಾರ ಕೊಡುವಾಗ ಮಾತ್ರ ಅಭಿವೃದ್ಧಿ ವಿಚಾರ ನೆನಪಿಗೆ ಬರುತ್ತದೆ ಎಂದು ತಣ್ಣಗೆ ಸಿಟ್ಟನ್ನು ವ್ಯಕ್ತಪಡಿಸಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *