Breaking News

ಬಳ್ಳಾರಿ ಜಿಲ್ಲಾಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಕಿಡ್ನ್ಯಾಪ್: 3 ಕೋಟಿ ನೀಡುವಂತೆ ಬೇಡಿಕೆ

ಬಳ್ಳಾರಿ: ನಗರದ ಜಿಲ್ಲಾ ಆಸ್ಪತ್ರೆಯ ಮಕ್ಕಳ ವೈದ್ಯ ಡಾ.ಸುನೀಲ್ ಅವರನ್ನು ಅಪಹರಣ ಮಾಡಿರುವ ಘಟನೆ ನಗರದ ಸತ್ಯನಾರಾಯಣ ಪೇಟೆಯಲ್ಲಿನ ಶನೇಶ್ವರ ದೇವಸ್ಥಾನದ ಬಳಿ ಇಂದು (ಜ.25) ಬೆಳಿಗ್ಗೆ ನಡೆದಿದೆ.
ಸುನೀಲ್ ಅವರು ಬೆಳಿಗ್ಗೆ ವಾಕಿಂಗ್ ತೆರಳಿದ್ದ ವೇಳೆ ಇಂಡಿಕಾ ಕಾರಿನಲ್ಲಿ ಬಂದ ಅಪರಿಚಿತರು ಅಪಹರಣ ಮಾಡಿದ್ದು ಬಿಡುಗಡೆಗೆ ಮೂರೂ ಕೋಟಿ ರೂಪಾಯಿ ನೀಡುವಂತೆ ಬೇಡಿಕೆ ಇಟ್ಟಿದ್ದಾರೆ ಎಂದು ಹೇಳಲಾಗಿದೆ.
ಈ ಕುರಿತು ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನಾ ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿ ಅಪಹರಣಕಾರರ ಪತ್ತೆಗೆ ಬಲೆ ಬೀಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *