Breaking News

ಜನಾರ್ದನ ರೆಡ್ಡಿ, ಶ್ರೀರಾಮಲು ಕಾಂಗ್ರೆಸ್ ತೋರಿಸಿ ಬಿಜೆಪಿಯಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ: ಸಚಿವ ಜಮೀರ್

ಕೊಪ್ಪಳ : ಜನಾರ್ದನ ರೆಡ್ಡಿ ಮತ್ತು ಶ್ರೀರಾಮುಲು ನಡುವಿನ ಗುದ್ದಾಟ ಅವರ ಆಂತರಿಕ ವಿಚಾರವಾಗಿದ್ದು, ಅವರು ಕಾಂಗ್ರೆಸ್ ಬರುವ ಹಾಗೆ ಕಾಣುತ್ತಿಲ್ಲ. ಕಾಂಗ್ರೆಸ್ ತೋರಿಸಿ ಬಿಜೆಪಿಯಲ್ಲಿ ಬೇಳೆ ಬೇಯಿಸಿಕೊಳ್ಳುತ್ತಿದ್ದು, ನಾಟಕ ಮಾಡುತ್ತಿದ್ದಾರೆ ಎಂದು ನನಗೆ ಅನಿಸುತ್ತಿದೆ ಎಂದು ಸಚಿವ ಜಮೀರ್ ಅಹ್ಮದ್ ಖಾನ್ ರವಿವಾರ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ ನಾವು ಯಾರು ಅವರನ್ನು ಪಕ್ಷಕ್ಕೆ ಕರೆದಿಲ್ಲ. ನಮ್ಮ ಪಕ್ಷಕ್ಕೆ ತಗೋಬೇಕಾದ್ರೆ ಹೈಕಮಾಂಡ್ ಜತೆ ಚರ್ಚೆ ಮಾಡಿ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ರೆಡ್ಡಿ ಮತ್ತು ರಾಮುಲು ಇಬ್ಬರೂ ತಮ್ಮ ಬೇಳೆ ಬೇಯಿಸಿಕೊಳ್ಳುತ್ತಿದ್ದಾರೆ ಎಂದರು.
ರಾಜ್ಯದಲ್ಲಿ ಸಿಎಂ ಕುರ್ಚಿ ಸದ್ಯಕ್ಕೆ ಖಾಲಿಯಿಲ್ಲ. ಖಾಲಿಯಾದ ಮೇಲೆ ಚರ್ಚೆ ಮಾಡಬೇಕು. ಸಿದ್ದರಾಮಯ್ಯನವರೇ 5 ವರ್ಷ ‌ಸಿಎಂ ಆಗಿ ಇರುತ್ತಾರೆ. ಕೆಪಿಸಿಸಿ ಅಧ್ಯಕ್ಷ ಕುರ್ಚಿ ಕೂಡಾ ಖಾಲಿ ಇಲ್ಲ. ಹೈಕಮಾಂಡ್ ಹಾಕಿರುವ ಗೆರೆಯನ್ನು ನಾವು ದಾಟಲ್ಲ” ಎಂದರು.
ಮೂಡಾದಲ್ಲಿ ಸಿದ್ದರಾಮಯ್ಯ ನವರ ಪಾತ್ರ ಇಲ್ಲ. ಅರ್ಜಿದಾರ ಯಾರ ಮುಖಾಂತರ ಬಂದಿದ್ದಾರೆ, ಯಾರು ಆಪರೇಟರ್ ಮಾಡುತ್ತಿದ್ದಾರೆ ಎಂದು ಎಲ್ಲರಿಗೂ ಗೊತ್ತು. ಲೋಕಾಯುಕ್ತರು ಇನ್ನೂ ವರದಿ ನೀಡಿಲ್ಲ” ಎಂದರು.
ಹಿಂದಿನ ಬಿಜೆಪಿ ಸರ್ಕಾರದ ಅವದಿಯಲ್ಲಿ ಒಂದು ಮನೆ ಕೂಡಾ ನೀಡಿಲ್ಲ. ಅವರು ಒಂದೇ ಒಂದು ಮನೆ ನೀಡಿದ್ದೇನೆ ಅಂದರೆ ರಾಜಕೀಯ ನಿವೃತ್ತಿಯಾಗುತ್ತೇನೆ ಎಂದು ವಸತಿ ಸಚಿವ ಜಮೀರ್ ಹೇಳಿದರು.

Share News

About BigTv News

Check Also

ಆಟೋ ಗಲಾಟೆ: ದೇವಸ್ಥಾನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಸವರ್ಣೀಯರಿಂದ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರ ತಾಲೂಕಿನ ಗುರುಸಣಗಿ ಗ್ರಾಮದ ಸಿದ್ದಲಿಂಗೇಶ್ವರ ದೇವಸ್ಥಾನಕ್ಕೆ ದರ್ಶನಕ್ಕೆ ಬಂದಿದ್ದ ದಲಿತ ಕುಟುಂಬದ ಮೇಲೆ ಕಲ್ಲು ಹಾಗೂ …

Leave a Reply

Your email address will not be published. Required fields are marked *