ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‌ಸಿ) ಜನವರಿ 31 ಮತ್ತು ಫೆಬ್ರವರಿ 2ರಂದು ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಈ ಪರೀಕ್ಷೆಗಳಿಗೆ ಹಾಜರಾಗಲು ಅಭ್ಯರ್ಥಿಗಳು ಪರೀಕ್ಷೆ ಕೇಂದ್ರಕ್ಕೆ ತೆರಳಬೇಕು. ಬೇರೆ ಬೇರೆ ಜಿಲ್ಲೆಗಳಲ್ಲಿ ಪರೀಕ್ಷಾ ಕೇಂದ್ರಗಳು ಇರುವ ಕಾರಣ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸಬೇಕು ಎಂದು ಆಗ್ರಹಿಸಲಾಗಿದೆ.
ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಸಮಯದಲ್ಲಿ ಸರ್ಕಾರದ ಸೂಚನೆಯಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್‌ಆರ್‌ಟಿಸಿ) ಹೆಚ್ಚುವರಿ ಬಸ್ ವ್ಯವಸ್ಥೆ ಮಾಡುತ್ತದೆ. ಈ ಬಾರಿಯೂ ಬಸ್ ವ್ಯವಸ್ಥೆ ಮಾಡಬೇಕು ಎಂದು ಸಾಮಾಜಿಕ ಜಾಲತಾಣದಲ್ಲಿ ಸರ್ಕಾರವನ್ನು ಒತ್ತಾಯಿಸಲಾಗುತ್ತದೆ.
ಜನವರಿ 31ರ ಶುಕ್ರವಾರ ಮತ್ತು ಫೆಬ್ರವರಿ 2ರ ಭಾನುವಾರ ಕೆಪಿಎಸ್‌ಸಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಈ ಪರೀಕ್ಷೆ ಬರೆಯುವ ಅಭ್ಯರ್ಥಿಗಳ ಅನುಕೂಲಕ್ಕಾಗಿ ಹೆಚ್ಚುವರಿ ಬಸ್ ಸೌಲಭ್ಯ ಒದಗಿಸಬೇಕು ಎಂದು ಸಾಮಾಜಿಕ ಜಾಲತಾಣದ ಮೂಲಕ ಮನವಿ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

