ಉತ್ತರ ಪ್ರದೇಶ : ಮಹಾಕುಂಭಮೇಳ ಅಭೂತಪೂರ್ವ ಯಶಸ್ಸು ಗಳಿಸಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಯಾಗ್ ರಾಜ್ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಭೇಟಿ ನೀಡಿದ್ದು. ತ್ರೀವೇಣಿ ಸಂಗಮದಲ್ಲಿ ಪುಣ್ಯಸ್ನಾನ ಮಾಡಿ ಪುನೀತರಾಗಿದ್ದಾರೆ.ಅಮಿತ್ ಶಾಗೆ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ಸಾಥ್ ನೀಡಿದ್ದಾರೆ.
ಇವತ್ತು ಬೆಳಿಗ್ಗೆ 11:30ರ ಸುಮಾರಿಗೆ ಉತ್ತರ ಪ್ರದೇಶದ ಬಮ್ರೌಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅಮಿತ್ ಶಾರನ್ನು. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಉಪಮುಖ್ಯಮಂತ್ರಿ ಕೇಶವ್ ಮೌರ್ಯ ಮತ್ತು ಬ್ರಜೇಶ್ ಪಾಠಕ್ ಸ್ವಾಗತಿಸಿದರು. ಅಲ್ಲಿಂದ ಕುಂಭಮೇಳೆ ನಡೆಯುತ್ತಿರುವ ಸ್ಥಳಕ್ಕೆ ಅಮಿತ್ ಶಾ ತೆರಳಿದರು.
ತ್ರಿವೇಣಿ ಸಂಗಮಕ್ಕೆ ತೆರಳಿದ ಅಮಿತ್ ಶಾ, ನದಿಯಲ್ಲಿ ಪುಣ್ಯ ಸ್ನಾನ ಕೈಗೊಂಡರು. ಈ ವೇಳೆ ಸಿಎಂ ಯೋಗಿ ಆದಿತ್ಯನಾಥ್ ಸೇರಿದಂತೆ ಜುನಾ ಅಖಾಡದ ಮಹಾಮಂಡಲೇಶ್ವರ ಅವಧೇಶಾನಂದ ಸೇರಿದಂತೆ ಅನೇಕ ಸಂತರು ಅಮಿತ್ ಶಾ ಜೊತೆ ನದಿಯಲ್ಲಿ ಪುಣ್ಯ ಸ್ನಾನ ಮಾಡಿದರು
ಅಮಿತ್ ಶಾ ಭೇಟಿ ಹಿನ್ನೆಲೆ ಬೆಳಗ್ಗೆಯಿಂದಲೇ ಎಲ್ಲಾ ಘಾಟ್‌ಗಳಲ್ಲಿ ಬೋಟ್‌ಗಳ ಕಾರ್ಯಾಚರಣೆಯನ್ನು ನಿಲ್ಲಿಸಲಾಗಿತ್ತು. ಹನುಮಾನ್ ದೇವಸ್ಥಾನದ ಪ್ರವೇಶವನ್ನು ಮುಚ್ಚಲಾಗಿತ್ತು. ಪ್ರಯಾಗ್ ರಾಜ್ ನೆಲ್ಲೆಡೆ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜನೆ ಮಾಡಲಾಗಿತ್ತು.
bigtvnews | Hubli Dharwad News | Kannada News | Karnataka News Hubli News | News In Hubli | Local news

