ಬೆಂಗಳೂರು: ಆಧಾರ್ ಸೀಡಿಂಗ್ ಕಾರ್ಯಕ್ರಮದ ಯಶಸ್ಸಿಗೆ ಸಹಕಾರ ನೀಡಿದ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ ಒಟ್ಟು 4.5 ಕೋಟಿ ರೂ. ಮೊತ್ತದ ಪ್ರೋತ್ಸಾಹಧನ ನೀಡಲು ನಿರ್ಧರಿಸಲಾಗಿದೆ.
ಸೋಮವಾರ ಕಂದಾಯ ಸಚಿವ ಕೃಷ್ಣ ಬೈರೇಗೌಡ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ರಾಜ್ಯದ 2.12 ಕೋಟಿ ಜಮೀನುಗಳ ಪಹಣಿಗಳಿಗೆ ಆಧಾರ್ ಜೋಡಣೆ ಮಾಡಲಾಗಿದೆ. ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಗರು ಈ ಕಾರ್ಯನಿರ್ವಹಿಸಿದ್ದು, ಇವರು ಕೆಲಸ ಮಾಡದಿದ್ದಲ್ಲಿ ಆಧಾರ್ ಸೀಡಿಂಗ್ ಸಾಧ್ಯವಾಗುತ್ತಿರಲಿಲ್ಲ ಎಂದು ಹೇಳಿದ್ದಾರೆ.
ಅನೇಕ ಗ್ರಾಮ ಸಹಾಯಕರು, ಗ್ರಾಮ ಲೆಕ್ಕಿಗರು ತಮ್ಮ ಕೈಯಿಂದ ಹಣ ಖರ್ಚು ಮಾಡಿ ಆಧಾರ್ ಸೀಡಿಂಗ್ ಮಾಡಿದ್ದಾರೆ. ಹೀಗಾಗಿ ಗ್ರಾಮ ಸಹಾಯಕರು ಮತ್ತು ಗ್ರಾಮ ಲೆಕ್ಕಿಗರಿಗೆ ಪ್ರೋತ್ಸಾಹ ಧನ ನೀಡಲು ತೀರ್ಮಾನಿಸಲಾಗಿದೆ ಎಂದು ಸಚಿವರು ಹೇಳಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





