ಬೆಂಗಳೂರು: ಉನ್ನತ ಶಿಕ್ಷಣ ಇಲಾಖೆಯಲ್ಲಿ ಖಾಲಿ ಇರುವ ಎಲ್ಲ ಹುದ್ದೆಗಳನ್ನು ಹಂತ ಹಂತವಾಗಿ ಮುಂದಿನ 5 ವರ್ಷಗಳಲ್ಲಿ ಭರ್ತಿ ಮಾಡಲಾಗುವುದು. ಈ ಸಂಬಂಧ ಆರ್ಥಿಕ ಇಲಾಖೆಯ ಜತೆಗೂ ಚರ್ಚಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ| ಎಂ.ಸಿ. ಸುಧಾಕರ್ ತಿಳಿಸಿದರು.
ನಗರದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನೂತನವಾಗಿ ನೇಮಕಗೊಂಡ ಸಹಾಯಕ ಪ್ರಾಧ್ಯಾಪಕರಿಗೆ ವೃತ್ತಿ ಮಾರ್ಗದರ್ಶನ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
ಮುಂದಿನ ಫೆಬ್ರವರಿ ತಿಂಗಳ ಅಂತ್ಯದ ವೇಳೆಗೆ 310 ಮಂದಿ ಪದವಿ ಕಾಲೇಜುಗಳ ಪ್ರಾಂಶುಪಾಲರನ್ನು ನೇಮಿಸಿಕೊಳ್ಳುವ ಪ್ರಕ್ರಿಯೆ ಮುಗಿಯಲಿದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

