Breaking News

ಜನರ ಪ್ರಾಣಕ್ಕೆ ಕಂಟಕವಾದ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ಮುಂದಾದ ರಾಜ್ಯ ಸರ್ಕಾರ

ಬೆಂಗಳೂರು: ಮೈಕ್ರೋ ಫೈನಾನ್ಸ್ ಕಂಪನಿಗಳು ಸಾಲ ವಸೂಲಿ ನೆಪದಲ್ಲಿ ಸಾಲಗಾರರನ್ನು ಇನ್ನಿಲ್ಲದಂತೆ ಕಾಡಿ ಕಂಗೆಡಿಸಿವೆ. ಸಾಕಷ್ಟು ಜನರ ಪ್ರಾಣಕ್ಕೆ ಕಂಟಕವಾಗಿವೆ. ಜೀವ ಹಿಂಡುವ ಇಂತಹ ಪೈನಾನ್ಸ್ ಕಂಪನಿಗಳಿಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಮುಂದಾಗಿದೆ.
ಕಾನೂನು ತಿದ್ದುಪಡಿಗೆ ತುರ್ತಾಗಿ ಸುಗ್ರೀವಾಜ್ಞೆ ರೂಪಿಸಲು ಸರ್ಕಾರ ಮುಂದಾಗಿದೆ. ಈ ನಡುವೆ ಪೊಲೀಸ್ ಇಲಾಖೆ ಕೂಡ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಮೂಗುದಾರ ಹಾಕುವ ನಿಟ್ಟಿನಲ್ಲಿ ನಿನ್ನೆ ಹಿರಿಯ ಅಧಿಕಾರಿಗಳ ಸಭೆ ನಡೆಸಿದ್ದಾರೆ.
ಹಿರಿಯ ಪೊಲೀಸರ ಸಭೆ ನಡೆಸಿದ ಡಿಜಿಪಿ ಅಲೋಕ್ ಮೋಹನ್:
ಹೌದು, ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ಹೆಚ್ಚಾದ ಹಿನ್ನೆಲೆ, ಮೈಕ್ರೋ ಫೈನಾನ್ಸ್ ಗಳಿಗೆ ಮೂಗುದಾರ ಹಾಕಲು ಸಿದ್ಧತೆ ಕೂಡ ಚುರುಕುಗೊಂಡಿದೆ. ಕಟ್ಟುನಿಟ್ಟಿನ ನಿಯಮಾವಳಿ ರೂಪಿಸಲು ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ. ಡಿಜಿಪಿ ಅಲೋಕ್ ಮೋಹನ್ ನೇತೃತ್ವದಲ್ಲಿ ನಿನ್ನೆ (ಜನವರಿ 27) ಹಿರಿಯ ಅಧಿಕಾರಿಗಳು ಸಭೆ ನಡೆಸಿದ್ದಾರೆ.
ಒತ್ತಾಯ ಪೂರ್ವಕವಾಗಿ ಯಾವುದೇ ಸಾಲ ಕೇಳುವಂತಿಲ್ಲ:
ಸಭೆಯಲ್ಲಿ ಮೈಕ್ರೋ ಫೈನಾನ್ಸ್ ಹಾವಳಿ ತಡೆಗಟ್ಟುವ ಕುರಿತು ಕೆಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದು, ಮುಖ್ಯವಾಗಿ ಒತ್ತಾಯ ಪೂರ್ವಕವಾಗಿ ಯಾವುದೇ ಸಾಲ ಕೇಳುವಂತಿಲ್ಲ, ಸಾಲ ವಸೂಲಿ ನೆಪದಲ್ಲಿ ಮಾನಹಾನಿ, ವೈಯಕ್ತಿಕ ತೇಜೋವಧೆ ಮಾಡುವಂತಿಲ್ಲ. ಸಾರ್ವಜನಿಕವಾಗಿ ಗಲಾಟೆ ಮಾಡುವುದು, ಮನೆ ಮೇಲೆ ಪೇಯಿಂಟ್ ನಲ್ಲಿ ಬರೆಯುವಂತಿಲ್ಲ ಮಾಡುವುಂತಿಲ್ಲ. ಒಂದು ವೇಳೆ ಈ ರೀತಿಯ ಕೃತ್ಯಗಳು ನಡೆದರೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ.
ಮೈಕ್ರೋ ಫೈನಾನ್ಸ್ ಕಂಪನಿಗಳ ಲೈಸೆನ್ಸ್ ರದ್ದು:
ಲೈಸೆನ್ಸ್ ಇಲ್ಲದೆ ಮೈಕ್ರೋ ಫೈನಾನ್ಸ್ ಹಣ ನೀಡಿದರೆ ತಕ್ಷಣ ಕ್ರಮ ಕೈಗೊಳ್ಳುವುದು. ನಿಯಮಗಳನ್ನು ಉಲ್ಲಂಘನೆ ಮಾಡುವ ಮೈಕ್ರೋ ಫೈನಾನ್ಸ್ ಕಂಪನಿಗಳ ಲೈಸೆನ್ಸ್ ರದ್ದು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದು. ಇದೇ ವಾರ ಅಧಿಕೃತವಾಗಿ ಕೆಲವು ನಿಯಮಗಳನ್ನು ಜಾರಿಗೆ ತರಲು ಪೊಲೀಸರು ಸಿದ್ದತೆ ಮಾಡಿಕೊಂಡಿದ್ದಾರೆ.
ನಗರದಲ್ಲಿ ಎಚ್ಚರಿಕೆ ವಹಿಸಲು ಕಮೀಷನರ್ ದಯಾನಂದ್ ಸೂಚನೆ:
ಬೆಂಗಳೂರು ನಗರದಲ್ಲೂ ಮೈಕ್ರೋ ಫೈನಾನ್ಸ್ ಕಾಟ ಹೆಚ್ಚಾಗಿದ್ದು, ನಗರದಲ್ಲಿ ಎಚ್ಚರಿಕೆ ವಹಿಸಲು ಕಮೀಷನರ್ ದಯಾನಂದ್ ಸೂಚನೆ ನೀಡಿದ್ದಾರೆ. ಯಾವುದೇ ಸಾವು ನೋವು ಸಂಭವಿಸುವುದಕ್ಕೂ ಮುನ್ನ ಎಚ್ಚೆತ್ತುಕೊಳ್ಳಲು ಪೊಲೀಸರಿಗೆ ಸೂಚನೆ ನೀಡಲಾಗಿದೆ. ಅಂತಹ ದೂರುಗಳು ಬಂದರೆ ನಿರ್ಲಕ್ಷ್ಯ ಮಾಡದೆ ಕ್ರಮ ಜರುಗಿಸುವುದು. ಮೈಕ್ರೋ ಫೈನಾನ್ಸ್ ದೂರುಗಳು ಬಂದಲ್ಲಿ ಖುದ್ದು ಇನ್ಸ್‌ಪೆಕ್ಟರ್ ಜಾಗೃತೆ ವಹಿಸಿ ಕ್ರಮಕೈಗೊಳ್ಳಬೇಕು, ನಿಯಮಾವಳಿ ಜಾರಿಗೆ ಬರುವ‌ವರೆಗೂ ಎಚ್ಚರಿಕೆ ವಹಿಸುವಂತೆ ಕಮೀಷನರ್ ಸೂಚನೆ ನೀಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಸೂಚನೆ ಬೆನ್ನಲ್ಲೆ ಪೊಲೀಸರು ಅಲರ್ಟ್:
ಮೈಕ್ರೋ ಫೈನಾನ್ಸ್ ಕಿರುಕುಳ ತಡೆಗಟ್ಟಲು ಅಗತ್ಯ ನಿಯಮಾವಳಿ ರೂಪಿಸುವಂತೆ ಸೂಚಿಸಿದ್ದ ಸಿಎಂ ಸಿದ್ದರಾಮಯ್ಯ ಸೂಚಿಸಿದ್ದ ಹಿನ್ನೆಲೆ ನಿನ್ನೆ ಹಿರಿಯ ಪೊಲೀಸ್ ಅಧಿಕಾರಿಗಳು ಸಭೆ ನಡೆಸಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *