Breaking News

ರಾಜ್ಯದಲ್ಲಿ ಅನುಕಂಪದ ಆಧಾರದಲ್ಲಿ ಉದ್ಯೋಗ ನಿರೀಕ್ಷೆಯಲ್ಲಿದ್ದವರಿಗೆ ಸಿಎಂ ಸಿದ್ದರಾಮಯ್ಯ ಸಿಹಿಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಅನುಕಂಪದ ಆಧಾರದ ಉದ್ಯೋಗ ನಿರೀಕ್ಷೆಯಲ್ಲಿದ್ದಂತ ಜನರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡ್ ನ್ಯೂಸ್ ಒಂದನ್ನು ನೀಡಿದ್ದಾರೆ. ಅದೇ ನೇಮಕಾತಿ ಸಂಬಂಧ ಮಹತ್ವದ ಬದಲಾವಣೆಯ ನಿರ್ಧಾರವನ್ನು ಕೈಗೊಂಡಿದ್ದಾರೆ.
ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಯಿತು.
ಈ ಸಭೆಯಲ್ಲಿ ಅರಣ್ಯ ಹಕ್ಕು ಸಮಿತಿ ನಿಗದಿತವಾಗಿ ಸಭೆಗಳನ್ನು ನಡೆಸಿ, ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರಗಳನ್ನು ನೀಡುವ ಪ್ರಕ್ರಿಯೆ ತ್ವರಿತಗೊಳಿಸಬೇಕು. 3430 ಪ್ರಕರಣಗಳಲ್ಲಿ ಹಕ್ಕುಪತ್ರ ನೀಡಲು ಇನ್ನೂ ಬಾಕಿಯಿದ್ದು, ಇದನ್ನು ಒಂದು ತಿಂಗಳ ಒಳಗಾಗಿ ಪೂರ್ಣಗೊಳಿಸಬೇಕು ಅಂತ ಸೂಚಿಸಿದರು.
ಹಕ್ಕುಪತ್ರ ನೀಡಿದ ಬಳಿಕ ಪಹಣಿಯಲ್ಲಿ‌ ಅವರ ಹೆಸರು ನಮೂದಿಸುವ ಕಾರ್ಯ ತ್ವರಿತಗೊಳಿಸಬೇಕು. ಕಂದಾಯ ಇಲಾಖೆ ಅಧಿಕಾರಿಗಳು ಇದನ್ನು ಆದ್ಯತೆ ಮೇಲೆ ಕೈಗೊಳ್ಳಬೇಕು. ಯಾವುದೇ ಕಾರಣಕ್ಕೂ ಅರಣ್ಯವಾಸಿಗಳನ್ನು ಒಕ್ಕಲೆಬ್ಬಿಸಬಾರದು ಎಂದರು.
ಎಸ್ಸಿ/ಎಸ್ಟಿ ಕಾಯ್ದೆಯಡಿ ದಾಖಲಾಗಿರುವ ಪ್ರಕರಣಗಳಲ್ಲಿ ನ್ಯಾಯಾಲಯಗಳು ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಕ್ರಮ ಕೈಗೊಳ್ಳಬೇಕು. 60ದಿನಗಳ ಒಳಗಾಗಿ ಆರೋಪಪಟ್ಟಿ ದಾಖಲಿಸಬೇಕು. ಇನ್ನೂ 665 ಪ್ರಕರಣಗಳು ತನಿಖೆಗೆ ಬಾಕಿಯಿದ್ದು, ಇದನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ನ್ಯಾಯಾಲಯಗಳಲ್ಲಿ ಶಿಕ್ಷೆ ಪ್ರಮಾಣ ಕಡಿಮೆಯಾಗುವುದನ್ನು ಒಪ್ಪಲು ಸಾಧ್ಯವಿಲ್ಲ ಎಂದು ಹೇಳಿದರು.
ಮೃತಪಟ್ಟ ಪ್ರಕರಣಗಳಲ್ಲಿ ಅನುಕಂಪ ಆಧಾರದ ಉದ್ಯೋಗಕ್ಕಾಗಿ ಮೃತಪಟ್ಟ ದಿನಾಂಕದಿಂದ 3 ವರ್ಷದ ಒಳಗೆ, ಅಪ್ರಾಪ್ತ ವಯಸ್ಸಿನ ಮಕ್ಕಳು 18 ವರ್ಷಗಳನ್ನು ಪೂರೈಸತಕ್ಕದ್ದು, ಎಂಬ ಮಿತಿಯನ್ನು ತೆಗೆದು ಹಾಕುವ ಬಗ್ಗೆ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಯಿತು.
ಸುಳ್ಳು ಜಾತಿ ಪ್ರಮಾಣ ಪತ್ರ ಪ್ರಕರಣಗಳಲ್ಲಿ ಅಂತಹ ಪ್ರಮಾಣ ಪತ್ರ ನೀಡುವ ಅಧಿಕಾರಿಯನ್ನು ಸಹ ಆರೋಪಿಯನ್ನಾಗಿ ಮಾಡಲಾಗುತ್ತದೆ. ಜಾತಿ ಪ್ರಮಾಣ ಪತ್ರ ನೀಡುವ ಸಂದರ್ಭದಲ್ಲಿ ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟೆಚ್ಚರ ವಹಿಸಬೇಕು ಎಂಬುದಾಗಿ ಖಡಕ್ ಸೂಚನೆ ನೀಡಿದರು.

Share News

About bigtvnews22

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *