ಬೆಂಗಳೂರು: ಹೈದರಾಬಾದ್ ಕರ್ನಾಟಕ(ಈಗಿನ ಕಲ್ಯಾಣ ಕರ್ನಾಟಕ) ಪ್ರದೇಶದ ಅಭಿವೃದ್ದಿಗಾಗಿ ಈ ಸಲ ಕೇಂದ್ರದ ಬಜೆಟ್ ನಲ್ಲಿ 5 ಸಾವಿರ ಕೋಟಿ ರೂ. ವಿಶೇಷ ಅನುದಾನ ಬಿಡುಗಡೆಗೆ ಕ್ರಮವಹಿಸುವಂತೆ ರಾಜ್ಯಸಭೆಯ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‍ಗೆ ಪತ್ರ ಬರೆದಿದ್ದಾರೆ.
ಪತ್ರದ ಸಾರಾಂಶ:
ಕಲ್ಯಾಣ ಕರ್ನಾಟಕ ಪ್ರದೇಶ ಶೈಕ್ಷಣಿಕ, ಆರೋಗ್ಯ, ಮೂಲಭೂತ ಸೌಲಭ್ಯ ಇತ್ಯಾದಿ ಕ್ಷೇತ್ರಗಳಲ್ಲಿ ಹಿಂದುಳಿದಿದ್ದು ಈ ಎಲ್ಲ ಕ್ಷೇತ್ರಗಳ ಅಭಿವೃದ್ದಿ ಪಡಿಸಲು ಆರ್ಥಿಕ ಸವಾಲು ಎದುರಿಸುತ್ತಿತ್ತು. ಈ ಹಿನ್ನೆಲೆಯಲ್ಲಿ ಅಂದಿನ ಯುಪಿಎ ಸರಕಾರ ಸಂವಿಧಾನಕ್ಕೆ ಅಗತ್ಯ ತಿದ್ದುಪಡಿ ತಂದು ಆರ್ಟಿಕಲ್ 371 (ಜೆ) ಜಾರಿಗೊಳಿಸಿ ಈ ಭಾಗದ ಸಮಗ್ರ ಅಭಿವೃದ್ದಿಗೆ ಶ್ರಮವಹಿಸಿತ್ತು ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಕರ್ನಾಟಕ ಸರಕಾರ ಸಮಸ್ಯೆಗಳನ್ನು ಪರಿಹರಿಸಲು ಸಾಕಷ್ಟು ಪ್ರಯತ್ನಗಳನ್ನು ಮಾಡಿದೆ. ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಗೆ (ಕೆಕೆಆರ್‌ಡಿಬಿ) ವಾರ್ಷಿಕವಾಗಿ 5 ಸಾವಿರ ಕೋಟಿ ರೂ.ಗಳನ್ನು ನಿಗದಿಪಡಿಸಿದೆ, 2024-25 ರ ಆರ್ಥಿಕ ವರ್ಷಕ್ಕೆ ಕೂಡ ಇದು ಅನ್ವಯವಾಗುತ್ತದೆ. ಇದರ ಜೊತೆಗೆ ಅಭಿವೃದ್ಧಿಗೆ ಹಲವಾರು ಯೋಜನೆ ಹಾಕಿಕೊಂಡಿದೆ ಎಂದು ಅವರು ಹೇಳಿದ್ದಾರೆ.
ಸರಕಾರದ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ 17,439 ಹುದ್ದೆಗಳನ್ನು ಹಂತಹಂತವಾಗಿ ಭರ್ತಿ ಮಾಡುವುದು, ಬೀದರ್ ಮತ್ತು ರಾಯಚೂರು ನಗರ ಪುರಸಭೆಗಳನ್ನು ನಗರ ಮುನ್ಸಿಪಲ್ ಕಾರ್ಪೋರೇಷನ್‍ಗಳಾಗಿ ಮೇಲ್ದರ್ಜೆಗೇರಿಸುವುದು, 45 ಹೊಸ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸ್ಥಾಪಿಸುವುದಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ತಿಳಿಸಿದ್ದಾರೆ.
ಅಲ್ಲದೇ, 31 ಪಿಎಚ್‍ಸಿಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಿಗೆ ಗಳನ್ನಾಗಿ ಹಾಗೂ ಒಂಭತ್ತು ಸಿಎಚ್‍ಸಿಗಳನ್ನು ತಾಲೂಕು ಆಸ್ಪತ್ರೆಗಳಾಗಿ ಮೇಲ್ದರ್ಜೆಗೇರಿಸುವುದು ಮತ್ತು ಎರಡು ತಾಲೂಕು ಆಸ್ಪತ್ರೆಗಳು ಕ್ರಮವಾಗಿ ಜಿಲ್ಲಾ ಆಸ್ಪತ್ರೆಗಳಾಗಿ ದರ್ಜೆಗೇರಿಸಬೇಕಿದೆ. ಈ ಎಲ್ಲ ಪ್ರಯತ್ನಗಳು ಶ್ಲಾಘನೀಯವಾಗಿದ್ದರೂ, ಇವುಗಳ ಜಾರಿಗಾಗಿ ಈ ಪ್ರದೇಶಕ್ಕೆ ನಿರಂತರ ಆರ್ಥಿಕ ಬೆಂಬಲದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕ ಸರಕಾರ ತನ್ನದೇ ಮಾದರಿಯಲ್ಲಿ ಕೇಂದ್ರ ಸರಕಾರದಿಂದ 5 ಸಾವಿರ ಕೋಟಿ ರೂ. ವಿಶೇಷ ಅನುದಾನಕ್ಕೆ ಒತ್ತಾಯಿಸುವ ನಿರ್ಣಯವನ್ನು ಅಂಗೀಕರಿಸಿದೆ. ಪ್ರದೇಶದ ಅಭಿವೃದ್ಧಿಯ ಅಗತ್ಯಗಳನ್ನು ಪರಿಹರಿಸಲು, ಪ್ರಮುಖ ಯೋಜನೆಗಳ ಕಾರ್ಯಗತಗೊಳಲು ಮತ್ತು ಈ ಭಾಗದ ಜನರ ಸಾಮಾಜಿಕ-ಆರ್ಥಿಕ ಪರಿಸ್ಥಿತಿಗಳನ್ನು ಸುಧಾರಿಸಲು ಈ ನಿರ್ಣಾಯಕ ನಿಧಿಯು ಅತ್ಯಗತ್ಯವಾಗಿದೆ ಎಂದು ಮಲ್ಲಿಕಾರ್ಜುನ ಖರ್ಗೆ ಪ್ರತಿಪಾದಿಸಿದ್ದಾರೆ.
ಈ ಎಲ್ಲ ಹಿನ್ನೆಲೆಯಲ್ಲಿ, ಮುಂಬರುವ ಕೇಂದ್ರ ಬಜೆಟ್‍ನಲ್ಲಿ ಹೈದರಾಬಾದ್-ಕರ್ನಾಟಕ ಪ್ರದೇಶದ ಅಭಿವೃದ್ಧಿಗೆ 5 ಸಾವಿರ ಕೋಟಿ ರೂ.ವಿಶೇಷ ಅನುದಾನವನ್ನು ಒದಗಿಸುವಂತೆ ಒತ್ತಾಯಿಸಿ, ಈ ಅನುದಾನ ಕಲ್ಯಾಣ ಕರ್ನಾಟಕ ಪ್ರದೇಶದ ಪ್ರಗತಿಯನ್ನು ಗಮನಾರ್ಹವಾಗಿ ವೇಗಗೊಳಿಸುವುದರ ಜೊತೆಗೆ ಹಲವಾರು ನಿರ್ಣಾಯಕ ಅಭಿವೃದ್ಧಿ ಸವಾಲುಗಳನ್ನು ಎದುರಿಸಲು ಸಹಕಾರಿಯಾಗುತ್ತದೆ ಎಂದು ಮಲ್ಲಿಕಾರ್ಜುನ ಖರ್ಗೆ ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news