Breaking News

ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಿಗೆ ಕ್ರಮ ಕೈಗೊಳ್ಳಿ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಬೆಂಗಳೂರು: ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ 60 ದಿನಗಳ ಒಳಗೆ ಆರೋಪಪಟ್ಟಿ ದಾಖಲಿಸುವ ಜತೆಗೆ ಶಿಕ್ಷೆಯ ಪ್ರಮಾಣ ಹೆಚ್ಚಳವಾಗುವಂತೆ ಕ್ರಮ ಕೈಗೊಳ್ಳಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.
ವಿಧಾನಸೌಧದಲ್ಲಿ ನಡೆದ ಪರಿಶಿಷ್ಟ ಜಾತಿ ಮತ್ತು ಪಂಗಡದ ಜಾಗೃತ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಈ ಪ್ರಕರಣಗಳಿಗೆ ಯಾರಾದರೂ ನ್ಯಾಯಾಲಯದಿಂದ ತಡೆಯಾಜ್ಞೆ ತಂದರೆ ಅಡ್ವೊಕೇಟ್‌ ಜನರಲ್‌ ಜತೆ ಚರ್ಚಿಸಿ ತಡೆಯಾಜ್ಞೆ ತೆರವುಗೊಳಿಸಿ.
ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ 2020ರಲ್ಲಿ ಶೇ. 10ರಷ್ಟಿದ್ದುದು, ಪ್ರಸ್ತುತ ಶೇ. 7ಕ್ಕೆ ಇಳಿದಿದೆ. ಶಿಕ್ಷೆಯ ಪ್ರಮಾಣವನ್ನು ಶೇ. 10ಕ್ಕೆ ಹೆಚ್ಚಿಸುವುದಕ್ಕೆ ಕ್ರಮ ತೆಗೆದುಕೊಳ್ಳಿ ಎಂದು ಸೂಚನೆ ನೀಡಿದರು.
ಈ ಬಗ್ಗೆ ಸರಕಾರಿ ಪ್ರಾಸಿಕ್ಯೂಟರ್‌ಗಳು ಹಾಗೂ ಪೊಲೀಸ್‌ ಇಲಾಖೆಯವರು ಪರಿಶೀಲನ ಸಭೆ ನಡೆಸಬೇಕು. ಜಾತಿ ದೌರ್ಜನ್ಯ ಪ್ರಕರಣಗಳ ಶಿಕ್ಷೆಯ ಪ್ರಮಾಣ ಹೆಚ್ಚಿಸುವ ಬಗ್ಗೆ ಜಿಲ್ಲಾ ಧಿಕಾರಿಗಳು ಮೂರು ತಿಂಗಳಿಗೊಮ್ಮೆ ತಪ್ಪದೆ ಪ್ರಗತಿ ಪರಿಶೀಲನ ಸಭೆ ನಡೆಸಲು, ಈ ಬಗ್ಗೆ ವಿಳಂಬ ನೀತಿ ಅನುಸರಿಸುವ ಅಧಿಕಾರಿಗಳ ವಿರುದ್ಧ ಕ್ರಮ ತೆಗೆದುಕೊಳ್ಳಲು ನಿರ್ದೇಶನ ನೀಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ದೌರ್ಜನ್ಯ ಪ್ರಕರಣಗಳಲ್ಲಿ ಸರಕಾರಿ ಪ್ರಾಸಿಕ್ಯೂಟರ್‌ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೆ ಆಡಾದವರಿಗೆ ನ್ಯಾಯ ಒದಗಿಸಬೇಕು. ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಒದಗಿಸುವುದು ಎಲ್ಲರ ಜವಾಬ್ದಾರಿ. ದೌರ್ಜನ್ಯ ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿಯನ್ನು ನಿಗದಿತ ಅವಧಿಯ ಒಳಗಾಗಿ ಸಲ್ಲಿಸಬೇಕು ಎಂದು ಹೇಳಿದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *