Breaking News

ಹಳೇ ಪಿಂಚಣಿ ಯೋಜನೆ ಜಾರಿಗೊಳಿಸಲು ಸರ್ಕಾರದ ಮೇಲೆ ಒತ್ತಡ ತರಲು ಪ್ರಯತ್ನ: ಸಿ.ಎಸ್.ಷಡಾಕ್ಷರಿ

ಕೋಲಾರ: ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯಾದ ಹಿಂದಿನ ಒಪಿಎಸ್ ಯೋಜನೆಯನ್ನು ಜಾರಿ ಮಾಡಲು ಸರ್ಕಾರದ ಮೇಲೆ ಒತ್ತಡ ತರಲು ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಎನ್ಪಿಎಸ್ ಪಿಂಚಣಿ ಯೋಜನೆಗೆ ವ್ಯಾಪಕವಾದ ವಿರೋದ ನೌಕರರ ಸಂಘದಿಂದ ವ್ಯಕ್ತವಾಗಿದೆ.
ಈ ಯೋಜನೆ ನೌಕರರ ಹಿತಾಸಕ್ತಿಯ ವಿರುದ್ದವಾಗಿದೆ ಎಂದು ರಾಜ್ಯ ಸರಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಭರವಸೆ ನೀಡಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರಾಗಿ ಎರಡನೇ ಬಾರಿಗೆ ಆಯ್ಕೆಯಾಗಿರುವ ಸಿ.ಎಸ್ ಷಡಾಕ್ಷರಿ ಅವರನ್ನು ಕೋಲಾರ ರಂಗಮಂದಿರದಲ್ಲಿ ಜಿಲ್ಲಾ ಸರ್ಕಾರಿ ನೌಕರರ ಸಂಘದಿಂದ ಅಭಿನಂದಿಸಲಾಯಿತು
ಕಳೆದ ಐದು ವರ್ಷದಲ್ಲಿ ಸುಮಾರು 25 ಆದೇಶಗಳನ್ನು ನೌಕರರ ಪರವಾಗಿ ರಾಜ್ಯ ಸರ್ಕಾರದಿಂದ ಜಾರಿಗೊಳಿಸಲಾಗಿದೆ. ಎರಡು ಮೂರು ತಿಂಗಳಲ್ಲಿ ನೌಕರರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ವಿಮೆಯೊಂದಿಗೆ ಡಯಾಲಿಸಿಸ್ ಹಾಗೂ ಕ್ಯಾನ್ಸರ್ ಅಂತಹ ಕಾಯಿಲೆಗಳಿಗೆ ಆರು ತಿಂಗಳ ರಜೆಯೊಂದಿಗೆ ಸಂಬಳ ನೀಡುವ ಆದೇಶವನ್ನು ಜಾರಿ ಮಾಡಲಾಗುತ್ತದೆ ಮುಂದಿನ ವರ್ಷ 2026 ರಲ್ಲಿ ಕೇಂದ್ರ ಸರ್ಕಾರದ ವೇತನ ಆಯೋಗದ ಜಾರಿ ರೀತಿಯಲ್ಲಿಯೇ ರಾಜ್ಯದಲ್ಲೂ 8 ನೇ ವೇತನ ಆಯೋಗವನ್ನು ಜಾರಿಗೊಳಿಸಲು ಪ್ರತಿಯೊಬ್ಬ ನೌಕರರ ಸಹಕಾರ ಮುಖ್ಯವಾಗಿದೆ ಎಂದು ತಿಳಿಸಿದರು.
ರಾಜ್ಯದಲ್ಲಿ ನೌಕರರ ನಿರಂತರ ಚಟುವಟಿಕೆಗಳಿಗೆ ನೌಕರರ ಭವನಗಳು ಅವಶ್ಯಕತೆ ಇದ್ದು ಪ್ರತಿ ಜಿಲ್ಲಾ ಕೇಂದ್ರದಲ್ಲಿ ಹಾಗೂ ತಾಲ್ಲೂಕು ಕೇಂದ್ರಗಳಲ್ಲಿ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಮೊದಲ ಅಧ್ಯತೆ ನೀಡಲಾಗುತ್ತದೆ ಅದರಂತೆ ಸರ್ಕಾರದಿಂದ ಪ್ರತಿ ಜಿಲ್ಲಾ ಕೇಂದ್ರದಲ್ಲಿ ತಲಾ 50 ಲಕ್ಷ ಹಾಗೂ ತಾಲ್ಲೂಕು ಕೇಂದ್ರಕ್ಕೆ 25 ಲಕ್ಷ ರೂಗಳನ್ನು ಬಿಡುಗಡೆ ಮಾಡಿಸಲು ಒತ್ತಾಯಿಸಲಾಗುತ್ತದೆ ನೌಕರರ ಸಹಕಾರ ಹಾಗೂ ಸಂಘಟನೆ ಮೂಲಕ ನಮ್ಮ ಎಲ್ಲಾ ಹಕ್ಕುಗಳನ್ನು ಹಾಗೂ ಸೌಲಭ್ಯಗಳನ್ನು ಪಡೆಯಲು ರಾಜ್ಯ ಸರ್ಕಾರಿ ನೌಕರರ ಸಂಘವು ಶತಪ್ರಯತ್ನ ಮಾಡಲಾಗುವುದೆಂದು ಹೇಳಿದರು.
ಕೋಲಾರ ಜಿಲ್ಲಾ ಅಧ್ಯಕ್ಷ ಎ.ಅಜಯ್ ಕುಮಾರ್ ಮಾತನಾಡಿ ರಾಜ್ಯ ಸಂಘವು ನಿರಂತರ ಪ್ರಯತ್ನದಿಂದ ಸುಮಾರು 25 ನೌಕರರ ಸ್ನೇಹಿ ಆದೇಶಗಳನ್ನು ಜಾರಿ ಮಾಡಲಾಗಿದೆ ಮುಂದೆ ಆರೋಗ್ಯ ಸಂಜೀವಿನಿ, ಒಪಿಎಸ್ ಜಾರಿಗೆ ಜಿಲ್ಲಾ ಸಂಘವು ರಾಜ್ಯ ಸಂಘಕ್ಕೆ ಸಂಪೂರ್ಣ ಬೆಂಬಲ ನೀಡಲಿದೆ ಕೋಲಾರ ಜಿಲ್ಲೆಯಲ್ಲಿನ ನೌಕರರ ಭವನಕ್ಕೆ ಅನುದಾನ ಕೊಡಿಸುವ ಜೊತೆಗೆ ಗಡಿನಾಡು ಉತ್ಸವ, ಹಾಗೂ ರಾಜ್ಯ ಕಾರ್ಯಕಾರಣಿ ಸಭೆ ನಡೆಸಲು ಅವಕಾಶ ನೀಡುವಂತೆ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಉತ್ತಮ ಶಿಕ್ಷಕರನ್ನು ಸಾವಿತ್ರಿ ಬಾಯಿ ಪುಲೆ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಸರ್ಕಾರಿ ನೌಕರರ ಸಂಘದ ಗೌರವಾಧ್ಯಕ್ಷ ಎಸ್.ಬಸವರಾಜ್, ಪ್ರಧಾನ ಕಾರ್ಯದರ್ಶಿ ಹೆಚ್.ಗಿರಿಗೌಡ, ಖಜಾಂಚಿ ವಿ.ವಿ ಶಿವರುದ್ರಯ್ಯ, ರಾಜ್ಯ ಪರಿಷತ್ ಸದಸ್ಯರಾದ ಶ್ರೀನಿವಾಸರೆಡ್ಡಿ, ಕೆ.ಟಿ.ಸುರೇಶ್ ಬಾಬು, ಚೇತನ್, ಜ್ಞಾನಪ್ರಕಾಶ್, ಶಂಕರಪ್ಪ, ರಾಜೇಶ್, ಸೇರಿದಂತೆ ಜಿಲ್ಲಾ ಸಂಘದ ಪದಾಧಿಕಾರಿಗಳು ವೃಂದಸಂಘಗಳ ಅಧ್ಯಕ್ಷರುಗಳು ಹಾಗೂ ಪದಾಧಿಕಾರಿಗಳು ಭಾಗವಹಿಸಿದ್ದರು.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *