Breaking News

ಪಕ್ಷದ ಆಂತರಿಕ ಕಿತ್ತಾಟಕ್ಕೆ ಹೈಕಮಾಂಡೇ ಮದ್ದು: ಮಾಜಿ ಸಿಎಂ, ಸಂಸದ ಜಗದೀಶ ಶೆಟ್ಟರ್

ಹುಬ್ಬಳ್ಳಿ: ಪಕ್ಷದ ಆಂತರಿಕ ಕಿತ್ತಾಟಕ್ಕೆ ಹೈಕಮಾಂಡೇ ಮದ್ದು, ಬಿಜೆಪಿಯಲ್ಲಿ ಆಂತರಿಕ ಗುದ್ದಾಟ ಕ್ಕೆ ಶೀಘ್ರವೇ ತೆರೆ ಬೀಳುತ್ತೆ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

ನಗರದಲ್ಲಿಂದು ಮಾತನಾಡಿದ ಅವರು, ನೀವು ಮಾಧ್ಯಮದಲ್ಲಿ ತೋರಿಸೋದನ್ನ ಬಿಟ್ರೆ ಯಾರು ಮಾತನಾಡಲ್ಲ, ಜಗತ್ತಿನಲ್ಲಿಯೇ ಅತೀ ಹೆಚ್ಚು ಸದಸ್ಯತ್ವ ಹೊಂದಿರುವ ಪಕ್ಷ ಅದು ಬಿಜೆಪಿ ಪಕ್ಷ. ಈ ಹಿನ್ನೆಲೆ ಈ ರೀತಿ ಹೇಳಿಕೆ ಸಹಜ, ಹೈಕಮಾಂಡ್ ತೀರ್ಮಾನ ಕೈಗೊಳ್ಳುತ್ತೆ. ಶ್ರೀರಾಮುಲು ಯತ್ನಾಳ್ ಅಧ್ಯಕ್ಷ ಆಗೋಕೆ ಬೆಂಬಲ ವಿಚಾರ ಮಾಧ್ಯಮ ಸೃಷ್ಟಿಯಾಗಿದೆ. ಅಭಿಪ್ರಾಯ ಸಂಗ್ರಹ ಮಾಡಿ ಅಧ್ಯಕ್ಷರನ್ನು ಆಯ್ಕೆ ಮಾಡಲಾಗುತ್ತೆ ನನ್ನ ಅನುಭವ ಪ್ರಕಾರ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯಲ್ಲ ಎಂದು ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *