Breaking News

ಮಧ್ಯಂತರ ವರದಿ ಪರಿಗಣಿಸಿ ಒಳ ಮೀಸಲಾತಿ ಜಾರಿ ಮಾಡುವಂತೆ ಆಗ್ರಹ

ಹಾಸನ: ಒಳಮೀಸಲಾತಿಗೆ ಸಂಬಂಧಿಸಿದಂತೆ ರಚಿಸಲಾಗಿರುವ ನ್ಯಾ. ನಾಗಮೋಹನ್ ದಾಸ್ ಆಯೋಗಕ್ಕೆ ಕಾಲಾವಕಾಶ ವಿಸ್ತರಣೆ ಮಾಡದೇ, ಕೂಡಲೇ ಈಗಾಗಲೇ ಸಂಗ್ರಹಿಸಿರುವ ಮಧ್ಯಂತರ ವರದಿ ದತ್ತಾಂಶವನ್ನು ಪರಿಗಣಿಸಿ ಒಳ ಮೀಸಲಾತಿ ಜಾರಿ ಮಾಡುವಂತೆ ಕರ್ನಾಟಕ ಮಾದಿಗ ದಂಡೋರ ಜಿಲ್ಲಾ ಘಟಕದ ಅಧ್ಯಕ್ಷ ವೆಂಕಟೇಶ್ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿ ಜಾರಿಗೆ ಸಂಬಂಧ ಸುಪ್ರೀಂ ಕೋರ್ಟ್‌ ಐತಿಹಾಸಿಕ ತೀರ್ಪು ನೀಡಿದ್ದು, ಮೀಸಲಾತಿ ಜಾರಿ ವಿಷಯದಲ್ಲಿ ಆಯಾ ರಾಜ್ಯಗಳಿಗೆ ಅಧಿಕಾರ ಕೊಟ್ಟಿದೆ. ಆದರೂ ರಾಜ್ಯ ಸರ್ಕಾರ ವಿಳಂಬ ಧೋರಣೆ ಅನುಸರಿಸಿದೆ ಎಂದು ಆರೋಪಿಸಿದರು.
ಸುಪ್ರೀಂ ಕೋರ್ಟ್‌ ತೀರ್ಪಿನ ಅನುಸಾರ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿ ಮಾಡಬೇಕು. ಕಾಂಗ್ರೆಸ್ ಸರ್ಕಾರ ನಿರ್ಲಕ್ಷ್ಯ ಧೋರಣೆ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ನಡೆಸಲಾಗುವುದು ಎಂದರು.
ಹೊಸ ಆಯೋಗ ರಚಿಸಬೇಕು ಎನ್ನುವುದು ಮಾದಿಗ ಸಂಘಟನೆಗಳ ಒಳಮೀಸಲಾತಿ ಹೋರಾಟಗಾರರ ಬೇಡಿಕೆಯಾಗಿರಲಿಲ್ಲ. ಈಗಾಗಲೇ ಸರ್ಕಾರದ ಮುಂದೆ ನ್ಯಾ. ಸದಾಶಿವ ಆಯೋಗ, ಮಾಧುಸ್ವಾಮಿ ಸಮಿತಿ, 2011ರ ಜನಗಣತಿಯ ದತ್ತಾಂಶಗಳಿವೆ. ಈ ನಡುವೆ ನ್ಯಾ.ನಾಗಮೋಹನ್ ದಾಸ್ ಸಮಿತಿಯ ಅವಧಿಯನ್ನು ಒಂದು ತಿಂಗಳು ವಿಸ್ತರಿಸುವ ಹುನ್ನಾರವನ್ನು ಸರ್ಕಾರ ಮಾಡುತ್ತಿದೆ. ಇದನ್ನು ಕೈಬಿಟ್ಟು ಕೂಡಲೇ ಮಧ್ಯಂತರ ವರದಿ ಜಾರಿ ಮಾಡಬೇಕು ಎಂದು ಆಗ್ರಹಿಸಿದರು.
ಹಲವಾರು ವರ್ಷಗಳಿಂದ ಒಳಮೀಸಲಾತಿ ಸಂಬಂಧ ಹೋರಾಟ ನಡೆಸಲಾಗುತ್ತಿದೆ. ಇದೀಗ ಸುಪ್ರೀಂ ಕೋರ್ಟ್‌ ತೀರ್ಪಿಗೆ ಅನುಗುಣವಾಗಿ ಸರ್ಕಾರ ಮೀಸಲಾತಿ ಜಾರಿಗೆ ಮಧ್ಯಂತರ ವರದಿಯನ್ನು ಜನವರಿ 31ಕ್ಕೆ ಘೋಷಣೆ ಮಾಡಬೇಕು. ಇಲ್ಲವಾದರೆ ರಾಜ್ಯವ್ಯಾಪಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.
ಸುರೇಶ್, ರಂಗಸ್ವಾಮಿ, ವೆಂಕಟಯ್ಯ, ಲೋಕೇಶ್ ಇದ್ದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *