Breaking News

ರೈತರಿಗೆ ಗುಡ್ ನ್ಯೂಸ್: ಸ್ಪ್ರಿಂಕ್ಲರ್ ಗೆ ಶೇ.90 ರಷ್ಟು ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಮಡಿಕೇರಿ: 2024-25 ನೇ ಸಾಲಿನಲ್ಲಿ ಕೃಷಿ ಇಲಾಖೆಯ ಮುಖಾಂತರ ಸ್ಪ್ರಿಂಕ್ಲರ್‍ಗೆ ಶೇ.90ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ. ಈ ಸೌಲಭ್ಯವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಸಾಮಾನ್ಯ ವರ್ಗದವರಿಗೂ ಸಹ ಶೇ.90 ರಷ್ಟು ಸಹಾಯಧನವನ್ನು ನೀಡಲಾಗುತ್ತಿದೆ.
ರೈತ ಬಾಂಧವರು ತಮ್ಮ ಹೋಬಳಿ ಮಟ್ಟದ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ರೈತ ಸಂಪರ್ಕ ಕೇಂದ್ರದಲ್ಲಿ ಉಚಿತವಾಗಿ ನೀಡುವ ಅರ್ಜಿಯೊಂದಿಗೆ ತಮ್ಮ ಆಧಾರ್ ಕಾರ್ಡ್ ಜೆರಾಕ್ಸ್, ಪಹಣಿ, ಬ್ಯಾಂಕ್ ಪಾಸ್ ಪುಸ್ತಕ ಜೆರಾಕ್ಸ್, ಹಾಗೂ ಎರಡು ಸ್ಟ್ಯಾಂಪ್ ಅಳತೆಯ ಫೆÇೀಟೋಗಳನ್ನು ಸಲ್ಲಿಸುವುದರ ಮುಖಾಂತರ ಈ ಯೋಜನೆ ಅಡಿ ಫಲಾನುಭವಿಗಳಾಗಬಹುದು.
ಈ ಯೋಜನೆ ಅಡಿ ಒಂದು ಎಕರೆ ಜಮೀನಿಗಿಂತ ಹೆಚ್ಚಿನ ವಿಸ್ತೀರ್ಣ ಹೊಂದಿರುವ ರೈತರು 4139 ಹಣವನ್ನು ಪಾವತಿಸುವ ಮೂಲಕ ಒಟ್ಟು 30 ಪೈಪುಗಳು ಹಾಗೂ 5 ಸ್ಪ್ರಿಂಕ್ಲರ್ ಜೆಟ್‍ಗಳು ಹಾಗೂ ಇತರೆ ಸಾಮಗ್ರಿಗಳನ್ನು ಪಡೆಯಬಹುದು.
ಒಂದು ಎಕರೆಗಿಂತ ಕಡಿಮೆ ವಿಸ್ತೀರ್ಣ ಹಾಗೂ ಅರ್ಧ ಎಕರೆಗಿಂತ ಹೆಚ್ಚು ವಿಸ್ತೀರ್ಣ ಹೊಂದಿರುವ ರೈತರು ರೂ.2496 ಹಣವನ್ನು ಪಾವತಿಸುವುದರ ಮುಖಾಂತರ 18 ಪೈಪುಗಳು ಮತ್ತು 3 ಸಂಖ್ಯೆಯ ಜೆಟ್‍ಗಳನ್ನು ಹಾಗೂ ಇತರೆ ಸಾಮಗ್ರಿಗಳನ್ನು ಕೃಷಿ ಇಲಾಖೆಯಿಂದ ಪಡೆದುಕೊಂಡು ನೀರಾವರಿ ಅಗತ್ಯ ಇರುವ ಸಂದರ್ಭದಲ್ಲಿ ಬೆಳೆಗೆ ತುಂತುರು ನೀರಾವರಿಯನ್ನು ಹಾಯಿಸಿ ಹೆಚ್ಚಿನ ಇಳುವರಿಯನ್ನು ಪಡೆಯಬಹುದು. ಈ ಸೌಲಭ್ಯವನ್ನು ಸೋಮವಾರಪೇಟೆ ತಾಲೂಕು ಹಾಗೂ ಕುಶಾಲನಗರ ತಾಲೂಕು ವ್ಯಾಪ್ತಿಯ ಎಲ್ಲಾ ರೈತ ಬಾಂಧವರು ಇದರ ಸದುಪಯೋಗವನ್ನು ಪಡೆಯುವಂತೆ ಸೋಮವಾರಪೇಟೆ ಸಹಾಯಕ ಕೃಷಿ ನಿರ್ದೇಶಕರಾದ ವೀರಣ್ಣ.ಕೆ.ಪಿ. ಅವರು ತಿಳಿಸಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *