Breaking News

ಬಿಬಿಎಂಪಿ ಹೊರತುಪಡಿಸಿ ರಾಜ್ಯದ ನಗರ ಪಾಲಿಕೆ, ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ದಾಖಲೆಗಳಿಲ್ಲದ ನಿವೇಶನಗಳಿಗೆ ಬಿ ಖಾತಾ ನೀಡುವಂತೆ ಸಿಎಂ ಆದೇಶ

ಬೆಂಗಳೂರು: ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಹೊರತುಪಡಿಸಿ ರಾಜ್ಯದ ಉಳಿದ ನಗರಪಾಲಿಕೆ ಹಾಗೂ ಸ್ಥಳೀಯ ಸಂಸ್ಥೆಗಳ ಪ್ರದೇಶ ವ್ಯಾಪ್ತಿಯಲ್ಲಿ ಯಾವುದೇ ದಾಖಲೆಗಳಿಲ್ಲದ ನಿವೇಶನಗಳಿಗೆ ‘ಬಿ’ ಖಾತಾ ನೀಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಮಾಡಿದ್ದಾರೆ.
ಒಂದು ಬಾರಿಗೆ ಅನ್ವಯವಾಗುವಂತೆ ಈ ಆದೇಶ ಹೊರಡಿಸಿ, ಎಲ್ಲ ಅಕ್ರಮ ನಿವೇಶನಗಳನ್ನು ಸಕ್ರಮಗೊಳಿಸಿ ಇನ್ನು ಮುಂದೆ ರಾಜ್ಯದ ಯಾವುದೇ ಭಾಗದಲ್ಲಿ ಅನಧಿಕೃತ ಬಡಾವಣೆ ತಲೆ ಎತ್ತದಂತೆ ನೋಡಿಕೊಳ್ಳಿ ಎಂದು ಮುಖ್ಯಕಾರ್ಯದರ್ಶಿ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಗೃಹ ಕಚೇರಿ ಕೃಷ್ಣಾದಲ್ಲಿ ಕಂದಾಯ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲೇ ಈ ಆದೇಶ ಮಾಡಿದ ಮುಖ್ಯಮಂತ್ರಿ ಅವರು, ಬರುವ ಏಪ್ರಿಲ್ ಅಂತ್ಯದ ವೇಳೆಗೆ ಎಲ್ಲಾ ಅನಧಿಕೃತ ನಿವೇಶನಗಳಿಗೂ ದಾಖಲೆ ನೀಡಿ ಎಂದಿದ್ದಾರೆ.
ಬೆಂಗಳೂರು ನಗರ ಹೊರತುಪಡಿಸಿ ಮೈಸೂರು, ಶಿವಮೊಗ್ಗ, ದಾವಣಗೆರೆ, ಮಂಗಳೂರು, ಹುಬ್ಬಳ್ಳಿ-ಧಾರವಾಡ ಸೇರಿದಂತೆ ರಾಜ್ಯದ ಎಲ್ಲಾ ನಗರಪಾಲಿಕೆಗಳು ಹಾಗೂ ನಗರಸಭೆ ವ್ಯಾಪ್ತಿಯಲ್ಲಿನ ನಿವೇಶನಗಳಿಗೆ ‘ಬಿ’ ಖಾತಾ ನೀಡಿ. ಮೂರು ತಿಂಗಳ ಅವಧಿಯೊಳಗೆ ಸ್ಥಳೀಯ ಸಂಸ್ಥೆಗಳ ಆಸ್ತಿಗಳಿಗೆ ದಾಖಲೆ ನೀಡಿದ ನಂತರ ಪಂಚಾಯತ್ ವ್ಯಾಪ್ತಿಯಲ್ಲಿನ ನಿವೇಶನಗಳಿಗೂ ದಾಖಲೆ ನೀಡಿ ಎಂದು ಆದೇಶಿಸಿದ್ದಾರೆ.
ಬೆಂಗಳೂರು ಹೊರತುಪಡಿಸಿ ಉಳಿದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ 55 ಲಕ್ಷ ನಿವೇಶನಗಳಿದ್ದು, ಇವುಗಳಲ್ಲಿ 22 ನಿವೇಶನಗಳಿಗೆ ‘ಇ’ ಖಾತಾ ಪಡೆದಿದ್ದಾರೆ. ಉಳಿದ ನಿವೇಶನಗಳಿಗೆ ಯಾವುದೇ ರೀತಿಯ ದಾಖಲೆಗಳಿಲ್ಲ, ಆದ್ದರಿಂದ ಅವುಗಳನ್ನೂ ಸಕ್ರಮಗೊಳಿಸಿ, ತೆರಿಗೆ ವ್ಯಾಪ್ತಿಗೆ ತನ್ನಿ ಎಂದಿದ್ದಾರೆ.
ಇಂತಹ ನಿವೇಶನಗಳನ್ನು ಜಿಲ್ಲಾಡಳಿತವೇ ಗುರುತಿಸಿ ದಾಖಲೆ ನೀಡಬೇಕು, ಏಪ್ರಿಲ್ ನಂತರ ಯಾವೊಂದು ನಿವೇಶನವೂ ಅನಧಿಕೃತವಾಗಿರಬಾರದು ಎಂದು ಕಟ್ಟಾದೇಶ ಮಾಡಿದ್ದಾರೆ.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *