Breaking News

ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಗಳ ಕಿರುಕುಳ ತಡೆಗೆ ಹೊಸ ಮಸೂದೆ ಜಾರಿಗೆ ಚಿಂತನೆ: ಸಚಿವ ಎಚ್.ಕೆ.ಪಾಟೀಲ್‌

ಬೆಂಗಳೂರು : ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್​​​​​ಗಳ ಕಿರುಕುಳ ತಡೆಯಲು ಸುಗ್ರೀವಾಜ್ಞೆಗೆ ಈಗಾಗಲೇ ಸಚಿವ ಸಂಪುಟ ಅನುಮೋದನೆ ನೀಡಿದ್ದು, ಇನ್ನೆರಡು ದಿನ ಅಂದರೆ ನಾಳೆ ಇಲ್ಲವೇ ನಾಡಿದ್ದು, ಹೊಸ ಮಸೂದೆ ಜಾರಿಗೆಗೆ ಚಿಂತನೆ ನಡೆಸಲಾಗಿದೆ ಎಂದು ಕಾನೂನು ಸಚಿವ ಹೆಚ್.ಕೆ.ಪಾಟೀಲ್ ಅವರು ತಿಳಿಸಿದರು.
ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಗೃಹ ಕಚೇರಿ ಕೃಷ್ಣದಲ್ಲಿ ಇಂದು ನಡೆದ ಹಿರಿಯ ಸಚಿವರ ಮಹತ್ವದ ಸಭೆ ಬಳಿಕ ಪ್ರತಿಕ್ರಿಯೆ ನೀಡಿರುವ ಅವರು, ಸುಗ್ರೀವಾಜ್ಞೆಗೆ ಕುರಿತಾಗಿ ಕೆಲವು ಬದಲಾವಣೆ ಮಾಡಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ನಾಳೆ ಮಧ್ಯಾಹ್ನದ ವೇಳೆಗೆ ಒಂದು ಸ್ವರೂಪ ಬರಲಿದೆ ಎಂದರು.
ಫೈನಾನ್ಸ್​​ನವರು ಮನಬಂದಂತೆ ಬಡ್ಡಿಯನ್ನು ವಿಧಿಸುತ್ತಿದ್ದಾರೆ. ಅದಕ್ಕೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಕಾನೂನು ತರಬೇಕಾಗಿದೆ. ಸಭೆಯಲ್ಲಿ ಈ ಕುರಿತು ಹಲವು ವಿಚಾರಗಳ ಕುರಿತು ಚರ್ಚೆ ಮಾಡಲಾಗಿದೆ. ಸಭೆಯಲ್ಲಿ ಎಲ್ಲರೂ ಒಪ್ಪಿರುವ ಕೆಲವು ಅಂಶಗಳನ್ನು ಸೇರಿಸಲು ಚಿಂತಿಸಲಾಗಿದೆ. ನಾಲ್ವರ ಅಧಿಕಾರಿಗಳ ತಂಡ ಈ ಕುರಿತು ಕಾರ್ಯ ಆರಂಭಿಸಿದೆ. ಹೀಗಾಗಿ ನಾಳೆ ಸಾಯಂಕಾಲ ಅಥವಾ ನಾಡಿದ್ದು ಹೊಸ ಮಸೂದೆ ತಾಳಲಿದೆ. ಸಿಎಂ ಅವರಿಗೆ ಅಧಿಕಾರ ಕೊಟ್ಟಿದ್ದರಿಂದ ಮತ್ತೆ ಕ್ಯಾಬಿನೆಟ್​​​​​ಗೆ ತರಲಾಗುವುದಿಲ್ಲ. ಸುಗ್ರೀವಾಜ್ಞೆ ಜಾರಿಯಾದ ಮೇಲೆ ರಾಜ್ಯದಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದು ಅಭಿಪ್ರಾಯಪಟ್ಟರು.
ಇನ್ನು ಸುಗ್ರೀವಾಜ್ಞೆಯಲ್ಲಿರುವ ಅಂಶಗಳನ್ನು ಮತ್ತೊಮ್ಮೆ ಪರಿಶೀಲನೆ ಮಾಡಿ ಎಂದು ಹಿರಿಯ ಸಚಿವರ ಜೊತೆಗಿನ ಸಭೆಯಲ್ಲಿ ಸಿಎಂ ಸೂಚಿಸಿದ್ದಾರೆ. ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸುವ ನಿಟ್ಟಿನಲ್ಲಿ ಸುಗ್ರೀವಾಜ್ಞೆ. ಹೀಗಾಗಿ ಬಲಿಷ್ಠ ಕಾಯ್ದೆಯನ್ನು ಆದಷ್ಟು ಬೇಗ ಜಾರಿ ಮಾಡಬೇಕಿದೆ ಎಂದು ಸಭೆಯಲ್ಲಿ ಸಿಎಂ ಹೇಳಿದ್ದಾಗಿ ಹೆಚ್​​.ಕೆ.ಪಾಟೀಲರು ವಿವರಿಸಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *