ಬೆಂಗಳೂರು: ಕರ್ನಾಟಕ ಜಲಭದ್ರತೆ ಮತ್ತು ವಿಪತ್ತು ನಿರೋಧಕ ಕಾರ್ಯಕ್ರಮ ಕೈಗೆತ್ತಿಕೊಳ್ಳಲು ಉದ್ದೇಶಿಸಿರುವ ಸರಕಾರ, ಮುಂದಿನ 5 ವರ್ಷಗಳಲ್ಲಿ ವಿಶ್ವಬ್ಯಾಂಕ್ ನೆರವಿನೊಂದಿಗೆ 5 ಸಾವಿರ ಕೋಟಿ ರೂ. ವಿನಿಯೋಗಿಸಲು ನಿರ್ಧರಿಸಿದೆ. ಇದಕ್ಕೆ ಗುರುವಾರ ಸಚಿವ ಸಂಪುಟ ಅನುಮೋದನೆ ನೀಡಿತು.
ಅನಂತರ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು. ಬೆಂಗಳೂರು ಸೇರಿ ರಾಜ್ಯದ ವಿವಿಧೆಡೆ ಉಂಟಾಗುವ ನೆರೆಹಾವಳಿ ಅಧ್ಯಯನ, ನೆರೆಯಿಂದಾಗುವ ಅವಾಂತರಗಳಿಗೆ ಕಡಿವಾಣ ಹಾಕುವುದು, ಕುಡಿಯುವ ನೀರಿನ ಭದ್ರತೆಯಂತಹ ಹಲವು ಕಾರ್ಯಕ್ರಮಗಳನ್ನು ಇದರಡಿ ಕೈಗೆತ್ತಿಕೊಳ್ಳಲು ಉದ್ದೇಶಿಸಲಾಗಿದೆ ಎಂದರು.
ಈ ಕಾರ್ಯಕ್ರಮ ಮುಂದಿನ 5 ವರ್ಷಗಳದ್ದಾಗಿದ್ದು, ರಾಜ್ಯ ಸರಕಾರ 1,500 ಕೋಟಿ ರೂ. ವಿನಿಯೋಗಿಸಲಿದೆ. ಪೂರಕವಾಗಿ ವಿಶ್ವಬ್ಯಾಂಕಿನಿಂದ 3,500 ಕೋಟಿ ರೂ. ಸಾಲದ ರೂಪದಲ್ಲಿ ದೊರೆಯಲಿದೆ. 2025ರಿಂದ 2031ರ ವರೆಗೆ ಕೆಟಿಪಿಪಿ ಕಾಯ್ದೆ ಮತ್ತು ನಿಯಮಗಳ ಎಲ್ಲ ನಿಬಂಧನೆಗಳನ್ನು ಅನುಸರಿಸಿ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುವುದು. ಕಂದಾಯ ಇಲಾಖೆ ಇದರ ಮೇಲ್ವಿಚಾರಣೆ ನಡೆಸಲಿದೆ ಎಂದು ವಿವರಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

