Breaking News

ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು, ಉಪನ್ಯಾಸಕರಿಗೆ ಗೌರವಧನ ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್

ಬೆಂಗಳೂರು: ಹೊಸ ವರ್ಷದ ಆರಂಭದಲ್ಲೇ ಕರ್ನಾಟಕ ಸರ್ಕಾರದಿಂದ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಭರ್ಜರಿ ಗುಡ್‌ ನ್ಯೂಸ್‌ ನೀಡಲಾಗಿದೆ. ರಾಜ್ಯ ಸರ್ಕಾರದಿಂದ ಅತಿಥಿ ಶಿಕ್ಷಕರು ಹಾಗೂ ಅತಿಥಿ ಉಪನ್ಯಾಸಕರಿಗೆ ಗೌರವಧನವನ್ನು ಹೆಚ್ಚಳಕ್ಕೆ ಆರ್ಥಿಕ ಇಲಾಖೆ ಗ್ರೀನ್ ಸಿಗ್ನಲ್ ನೀಡಿದ್ದು, ಸಂಕಷ್ಟದಲ್ಲಿದ್ದ ಅತಿಥಿ ಶಿಕ್ಷಕರಿಗೆ ಶುಭಸುದ್ದಿ ಸಿಕ್ಕಂತಾಗಿದೆ.
ಈ ಕುರಿತಂತೆ ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದು, ಆಡಳಿತ ಇಲಾಖೆಯ ಪ್ರಸ್ತಾವನೆಯನ್ನು ಪರಿಶೀಲಿಸಿದೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರು ಮತ್ತು ಅತಿಥಿ ಉಪನ್ಯಾಸಕರ ಗೌರವಧವನ್ನು ಹೆಚ್ಚಿಸಲು ಆರ್ಥಿಕ ಇಲಾಖೆ ಸಹಮಿತಿಸಿದೆ ಎಂಬುದಾಗಿ ತಿಳಿಸಿದ್ದಾರೆ. ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆಯ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಅತಿಥಿ ಶಿಕ್ಷಕರ ಪ್ರಸ್ತುತ ಗೌರವಧನ ರೂ.10,500ರ ಜೊತೆಗೆ ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3,150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ರೂ.16,650ಕ್ಕೆ ಗೌರವಧನ ಏರಿಕೆ ಮಾಡಲಾಗಿದೆ.
ಇನ್ನೂ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ಪಾವತಿಸುತ್ತಿರುವ ಗೌರವಧನ ರೂ.12,000, ಮಾಸ್ಟರ್ ಆನ್ ಡ್ಯೂಟಿ ಭತ್ಯೆ ರೂ.3150 ಹಾಗೂ ಪ್ರಯಾಣ ಭತ್ಯೆ ರೂ.3000 ಸೇರಿದಂತೆ ಒಟ್ಟು ಗೌರವಧನವನ್ನು ರೂ.18,150ಕ್ಕೆ ಹೆಚ್ಚಳ ಮಾಡಲಾಗಿದೆ ಎಂದು ರಾಜ್ಯದ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಾಹಿತಿ ನೀಡಿದ್ದಾರೆ.

Share News

About BigTv News

Check Also

ವಿಟ್ಲ: 35 ಬಾರಿ ವಾರಂಟ್ ಜಾರಿಯಾಗಿದ್ದ ಆರೋಪಿ ಮಂಗಳೂರು ವಿಮಾನ ನಿಲ್ದಾಣದಲ್ಲಿ ಬಂಧನ

ಕಳೆದ ಒಂಬತ್ತು ವರ್ಷಗಳಿಂದ ವಿವಿಧ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ, ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಕುಖ್ಯಾತ ಆರೋಪಿಯನ್ನು ವಿಟ್ಲ …

Leave a Reply

Your email address will not be published. Required fields are marked *