Breaking News

ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನ ಹೆಚ್ಚಳಕ್ಕೆ ಒತ್ತಾಯಿಸಿ ಪ್ರತಿಭಟನೆ

ಧಾರವಾಡ: ರಾಜ್ಯ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ‌ನ ಪ್ರಿಯಾಂಕ ಗಾಂಧಿ ಅವರು ಅಂಗನವಾಡಿ ಕಾರ್ಯಕರ್ತರೆಯ ಸಹಾಯಧನ ಏರಿಕೆ ಗ್ಯಾರಂಟಿ ಘೋಷಣೆ ಮಾಡಿದ್ದು, ಆದರೆ ಇದುವರೆಗೂ ಈಡೇರಿಸದ ರಾಜ್ಯ ಸರ್ಕಾರ ನಿರ್ಲಕ್ಷ್ಯ ನಡೆ ಖಂಡಿಸಿ ಹಾಗೂ ಸಹಾಯಧನ 1ಸಾವಿರಕ್ಕೆ ಏರಿಸುವ ಮೂಲಕ 6ನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ, ಧಾರವಾಡದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಫೆಡರೇಶನ್ ನೇತೃತ್ವದಲ್ಲಿ ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆ ನಡೆಸಿ, ಸರ್ಕಾರದ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿದರು. ರಾಜ್ಯ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್‌ನ ನಾಯಕಿ ಪ್ರಿಯಾಂಕ ಗಾಂಧಿಯವರು ಆರನೇಯ ಗ್ಯಾರಂಟಿಯಾಗಿ ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನ ಏರಿಕೆ ಘೋಷಣೆ ಮಾಡಿದರು. ಆದರೆ ಗ್ಯಾರಂಟಿಗಳ ಘೋಷಣೆ ನಮ್ಮ ಪಾಲಿಗೆ ಘೋಷಣೆಯಾಗಿಯೇ ಉಳಿದಿದೆ. ಅಧಿಕಾರಕ್ಕೆ ಬಂದು ಎರಡು ವರ್ಷ ಸಮೀಪಿಸುತ್ತಿದ್ದರು. ನಮ್ಮ ಪಾಲಿನ ಆರನೇ ಗ್ಯಾರಂಟಿ ಈಡೇರುತ್ತಿಲ್ಲ.‌ ಹಾಗಾಗಿ ಈ ಕೂಡಲೇ ಅಂಗನವಾಡಿ ಕಾರ್ಯಕರ್ತೆಯರ ಸಹಾಯಧನ 15 ಸಾವಿರಕ್ಕೆ ಏರಿಸುವ ಮೂಲಕ ಸರ್ಕಾರದ ಆರನೇ ಗ್ಯಾರಂಟಿಯನ್ನು ಈಡೇರಿಸಬೇಕು.ಒಂದು ವೇಳೆ ಇದೇ ನಿರ್ಲಕ್ಷ್ಯ ಮುಂದುವರೆದಿದ್ದೆಯಾದಲ್ಲಿ ಉಗ್ರ ಹೋರಾಟಕ್ಕೆ ನಾವೆಲ್ಲರೂ ಮುಂದಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.‌

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *