Breaking News

ಕೊಪ್ಪಳ: ಹುಲಿಗೆಮ್ಮ ದೇವಿ ದೇವಸ್ಥಾನದ ಅಭಿವೃದ್ದಿಗೆ ಕೇಂದ್ರ ಸರ್ಕಾರದಿಂದ 100 ಕೋಟಿ ಅನುದಾನ

ಕೊಪ್ಪಳ: ಲಕ್ಷ ಲಕ್ಷ ಭಕ್ತರನ್ನು ಸೆಳೆಯುತ್ತಿರುವ ಹಾಗೂ ಕೋಟಿ ಕೋಟಿ ಆದಾಯ ತಂದುಕೊಡುತ್ತಿರುವ ಹುಲಿಗೆಮ್ಮ ದೇವಸ್ಥಾನವನ್ನು ಮಾಸ್ಟರ್‌ಪ್ಲಾನ್‌ನಂತೆ ಅಭಿವೃದ್ಧಿ ಮಾಡುವುದಕ್ಕೆ ಕೇಂದ್ರ ಸರ್ಕಾರ ₹100 ಕೋಟಿ ಅನುದಾನ ನೀಡಲು ತಾತ್ಕಾಲಿಕ ಅನುಮೋದನೆ ನೀಡಿದ್ದು, ಶೀಘ್ರದಲ್ಲಿಯೇ ಅನುದಾನ ಬಿಡುಗಡೆ ಆದೇಶವೂ ಆಗಬಹುದು.
ಸಂಸದ ರಾಜಶೇಖರ ಹಿಟ್ನಾಳ ಅವರು ಕೇಂದ್ರಕ್ಕೆ ಮಾಡಿದ್ದ ಮನವಿಗೆ ಸ್ಪಂದಿಸಿರುವ ಕೇಂದ್ರ ಸರ್ಕಾರ ತಕ್ಷಣ ಡಿಪಿಆರ್‌ ಕಳುಹಿಸಿಕೊಟ್ಟರೆ ನೀಡುವುದಾಗಿ ಹೇಳಿದೆ. ಹೀಗಾಗಿ ಬಹುದಿನಗಳ ಕನಸು ನನಸಾಗುವ ಕಾಲ ಸನ್ನಿಹಿತವಾಗಿದೆ.
ಹುಲಿಗೆಮ್ಮ ದೇವಸ್ಥಾನಕ್ಕೆ ಭಕ್ತರೆ ಸಂಖ್ಯೆ ವರ್ಷದಿಂದ ವರ್ಷಕ್ಕೆ ಹೆಚ್ಚುತ್ತಲೇ ಇದ್ದು, ನಾಡಿನ ಸುಪ್ರಸಿದ್ಧ ದೇವಾಲಯಗಳಂತೆಯೇ ಇಲ್ಲೂ ಭಕ್ತರಿಂದ ಕಾಣಿಕೆ ಹರಿದು ಬರುತ್ತಿದೆ. ಕೇವಲ 40 ದಿನಗಳಲ್ಲಿ ಕಾಣಿಕೆ ಹುಂಡಿಯಲ್ಲಿ 73 ಲಕ್ಷ ಬಂದಿದ್ದರೆ, 50 ಗ್ರಾಂ ಚಿನ್ನ ಹಾಗೂ 3500 ಗ್ರಾಂ ಬೆಳ್ಳಿ ಬಂದಿದೆ. ಇದರ ಲೆಕ್ಕಾಚಾರದಲ್ಲಿ ವಾರ್ಷಿಕವಾಗಿ ಐದಾರು ಕೋಟಿ ರು. ಕಾಣಿಕೆ ಬರುತ್ತಿದೆ. ಈಗಾಗಲೇ ದೇವಸ್ಥಾನದ ಬಳಿಯೇ ₹75 ಕೋಟಿಗೂ ಅಧಿಕ ಹಣ ಇದೆ.
ಭಕ್ತರ ಸಂಖ್ಯೆಯನ್ನಾಧರಿಸಿ ಯೋಜನೆ ರೂಪಿಸುವ ತುರ್ತು ಅಗತ್ಯವಿದೆ. ಲಕ್ಷ ಲಕ್ಷ ಭಕ್ತರು ಬರುವ ಶ್ರೀ ಹುಲಿಗೆಮ್ಮ ದೇವಸ್ಥಾನದ ಮಾಸ್ಟರ್‌ಪ್ಲಾನ್ ಅಡಿಯಲ್ಲಿ ಅಭಿವೃದ್ಧಿಪಡಿಸಲು 300 ಕೋಟಿ ಅಗತ್ಯವಿದೆ. ಇದರಡಿಯಲ್ಲಿಯೇ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದಮುಜರಾಯಿಖಾತೆ ಸಚಿವರಾಮಲಿಂಗಾರಡ್ಡಿ ಅಸ್ತು ಎಂದಿದ್ದಾರೆ. ಇದರ ಆಧಾರದಲ್ಲಿಯೇ ಹುಲಿಗೆಮ್ಮ ದೇವಸ್ಥಾನದ ಅಭಿವೃದ್ಧಿಗೆ ಅನುದಾನ ನೀಡುವಂತೆ ಸಂಸದ ರಾಜಶೇಖರ ಹಿಟ್ನಾಳ ಅವರು ರಾಜ್ಯ ಸರ್ಕಾರದ ಮೂಲಕ ಕೇಂದ್ರಕ್ಕೆ ಮನವಿ ಸಲ್ಲಿಸಿದ್ದರು. ಈಗ ಇದಕ್ಕೆ ಸ್ಪಂದಿಸಿರುವ ಕೇಂದ್ರ ಸರ್ಕಾರ ₹100 ಕೋಟಿ ಅನುದಾನವನ್ನು ಪ್ರಥಮ ಹಂತದಲ್ಲಿಯೇ ಬಿಡುಗಡೆ ಮಾಡಲಾಗುವುದು, ತುರ್ತಾಗಿ ಕಳುಹಿಸಿಕೊಡುವಂತೆ ಸೂಚಿಸಿದೆ.
ಹೀಗಾಗಿ, ಈಗ ಮುಜರಾಯಿ ಇಲಾಖೆ ಡಿಪಿಆರ್ ಕಳುಹಿಸಿಕೊಡಬೇಕಾಗಿದೆ. ಕೇಂದ್ರದಿಂದ ನೂರು ಕೋಟಿ ಬಂದರೆ ಹಾಗೂ ದೇವಸ್ಥಾನದ ಬಳಿ ಇರುವ 875 ಕೋಟಿ ಬಳಸಿದರೆ ಮಾಸ್ಟರ್‌ಪ್ಲಾನ್ ಅಡಿಯಲ್ಲಿಯೇ ಅಭಿವೃದ್ಧಿಪಡಿಸುವ ಬಹುದಿನಗಳ ಕನಸು ನನಸಾಗಬಹುದು.
ಕೇಂದ್ರಕ್ಕೆ ಮಾಡಿದ್ದ ಮನವಿಗೆ ಸ್ಪಂದನೆ ಸಿಕ್ಕಿದ್ದು, ₹100 ಕೋಟಿ ಕೊಡುವುದಾಗಿ ತಾತ್ಕಾಲಿಕ ಅನುಮೋದನೆ ನೀಡಿದ್ದು, ಡಿಪಿಆರ್ ಕಳುಹಿಸಿಕೊಡುವಂತೆ ಕೋರಿದ್ದಾರೆ. ತಕ್ಷಣ ರಾಜ್ಯ ಸರ್ಕಾರದ ಮೂಲಕ ಕಳುಹಿಸಿಕೊಡಲಾಗುವುದು ಎಂದು ಕೊಪ್ಪಳ ಸಂಸದ ರಾಜಶೇಖರ ಹಿಟ್ನಾಳ ತಿಳಿಸಿದ್ದಾರೆ.
ಹುಲಿಗೆಮ್ಮ ದೇವಸ್ಥಾನದ ಹುಂಡಿ ಎಣಿಕೆ ಕಾರ್ಯ ಗುರುವಾರ ದಿನ ಸಂಪೂರ್ಣವಾಗಿ ನಡೆಯಿತು. ಡಿ. 21ರಿಂದ ಜ. 30ರ ವರೆಗೆ 40 ದಿನಗಳಲ್ಲಿ ಹುಂಡಿಯಲ್ಲಿ ಕ 73,74,890 ಹಣ ಸಂಗ್ರಹವಾಗಿದೆ ಎಂದು ದೇವಸ್ಥಾನದ ಕಾರ್ಯದರ್ಶಿ ಪ್ರಕಾಶ್ ರಾವ್ ತಿಳಿಸಿದ್ದಾರೆ. ಇದಲ್ಲದೆ ಹುಂಡಿಯಲ್ಲಿ 50 ಗ್ರಾಂ ಬಂಗಾರ ಹಾಗೂ 3.5 ಕೆಜಿ ಬೆಳ್ಳಿ ಸಹ ಸಂಗ್ರಹವಾಗಿದೆ. ಹುಂಡಿ ಎಣಿಕೆಯಲ್ಲಿ ದೇವಸ್ಥಾನದ ಸಿಬ್ಬಂದಿ ಸ್ವಯಂಸೇವಕರು ಹಾಗೂ ಗ್ರಾಮಸ್ಥರು ಭಾಗವಹಿಸಿದ್ದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *