Breaking News

ನಮ್ಮಿಂದ ತಾನೇ ದೇಶದ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ: ಗ್ರಾಮೀಣಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ

ಹುಬ್ಬಳ್ಳಿ: ನಮ್ಮ ಬೇವರು, ನಮ್ಮ ದುಡಿಮೆ ಬೇಕಂತೆ ನೆರವು ಕೇಳೋದು ತಪ್ಪಾ, ನಮ್ಮಿಂದ ತಾನೇ ದೇಶ ಆರ್ಥಿಕ ಪರಿಸ್ಥಿತಿ ಸುಧಾರಣೆ ಆಗ್ತಾ ಇದೆ ಎಂದು ಗ್ರಾಮೀಣಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು, ಬಜೆಟ್ ಮೇಲೆ ನಮಗೆ ನಿರೀಕ್ಷೆ ಇಲ್ಲಾ ಮೋದಿಯವರ ಮಾಸ್ಟರ್ ಸ್ಟ್ರೋಕ್ ನಿಂದ ನಿರುದ್ಯೋಗ ತಾಂಡವ ಆಡ್ತಾ ಇದೆ. ಮಧ್ಯಮ ವರ್ಗ ನಿರ್ನಾಮವಾಗಿದೆ ರೈತರು ದೆಹಲಿಯಲ್ಲಿ ಪ್ರತಿಭಟನೆ ಮಾಡ್ತಾ ಇದ್ದಾರೆ. ಕರ್ನಾಟಕ ಎರಡನೇ ಹೆಚ್ಚು ಐಟಿ ಕಂಪನಿ ಹೊಂದಿರುವ ರಾಜ್ಯ ನಾವು 100 ರೂಪಾಯಿ ಟ್ಯಾಕ್ಸ್ ಕಟ್ಟಿದ್ರೆ 12 ರೂಪಾಯಿ ಕೊಡ್ತಾರೆ, ಯುಪಿ ಅವರಿಗೆ 120, ಬಿಹಾರ 178 ರೂಪಾಯಿ ಹೋಗ್ತಾ ಇದೆ. ಇಡೀ ಭಾರತ ದೇಶವನ್ನು ನಾವು ಸಮರ್ಥವಾಗಿ ನಡೆಸಿಕೊಂಡು ಹೋಗ್ತಾ ಇದ್ದೇವೆ, ನಮ್ಮ ರಾಜ್ಯದಿಂದಲೇ ಅತೀ ಹೆಚ್ಚು ಉದ್ಯೋಗ ಸೃಷ್ಟಿ ಆಗ್ತಿರೋದು ಅದಕ್ಕೆ ಯಾವುದೇ ನೆರವು ನೀಡೋದಿಲ್ಲ ಅಂದ್ರೆ ಹೇಗೆ..? ಬಜೆಟ್ ಮೇಲೆ ನನಗೆ ಯಾವುದೇ ನಿರೀಕ್ಷೆ ಇಲ್ಲಾ. ಕಳೆದ ಹತ್ತು ವರ್ಷದಿಂದ ನೋಡಿಕೊಂಡು ಬಂದಿದ್ದೇನೆ ಅದರ ಆಧಾರದ ಮೇಲೆ ಮಾತನಾಡುತ್ತಿದ್ದೇನೆ.

ರಾಜ್ಯದ ಅನುದಾನ ಕಳೆದ ಬಾರಿ ಕೇಳಿದ್ದೆ ಇದುವರೆಗೂ ಬಂದಿಲ್ಲ, ರಾಜ್ಯದ ಇತಿಹಾಸದಲ್ಲೇ ಮೊದಲ ಬಾರಿ ಮನವಿ ಪತ್ರ ಕೊಡದೆ ನಾವು ನಮ್ಮ ಹಕ್ಕಿಗಾಗಿ ಪ್ರತಿಭಟನೆ ಮಾಡಿದ್ದೇವೆ. ಆದರೂ ಕೂಡ ಕೇಂದ್ರದವರು ಕೊಡಲ್ಲ ಅಂದ್ರೆ ನಮಗೆ ಉಪಕಾರ ಮಾಡ್ತಾ ಇದ್ದಾರಾ? ಕೇಂದ್ರ ಸರ್ಕಾರದಿಂದ ಏನು ಬಂದಿಲ್ಲ ಅಂದ್ರೆ ಕಷ್ಟ ಆಗುತ್ತೆ ಎಂದರು.

Share News

About Shaikh BigTv

Check Also

ವಿಜಯಪುರದಲ್ಲಿ ಹಾಡಹಗಲೇ ಫೈರಿಂಗ್ : ನಡು ರಸ್ತೆಯಲ್ಲೇ ಗುಂಡಿನ ದಾಳಿ ನಡೆಸಿ, ವ್ಯಕ್ತಿಯ ಹತ್ಯೆ!

ವಿಜಯಪುರ: ನಗರದ ಮುಂಡೆವಾಡಿ ಆಸ್ಪತ್ರೆ ಬಳಿ ಯುವಕನೊಬ್ಬನನ್ನು ಗುಂಡಿಕ್ಕಿ ಕೊಲೆ ಮಾಡಲಾಗಿದೆ. ಟಕ್ಕೆ ಗ್ರಾಮದ ಯಾಸೀನ್ ಜುಬೇರ್ (ಮೃತ) ಸ್ಕೂಟಿಯಲ್ಲಿ …

Leave a Reply

Your email address will not be published. Required fields are marked *