ನವದೆಹಲಿ: ಚುನಾವಣೆಯ ಸಂದರ್ಭದಲ್ಲಿ ಹಲವು ರಾಜ್ಯಗಳಲ್ಲಿ ಗ್ಯಾರಂಟಿ ಯೋಜನೆಗಳ ಅಬ್ಬರ ಜೋರಾಗಿದೆ. ಹಲವು ಗ್ಯಾರಂಟಿ ಯೋಜನೆಗಳನ್ನ ನೀಡುವ ಮೂಲಕ ಹಲವು ಕಡೆ ಪಕ್ಷಗಳು ಅಧಿಕಾರಕ್ಕೆ ಬಂದಿದ್ದು, ಇದೀಗ ಗ್ಯಾರಂಟಿ ಯೋಜನೆಗಳ ನಡುವೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಮಹಿಳೆಯವರಿಗೆ ಭರ್ಜರಿ ಗುಡ್ ನ್ಯೂಸ್ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಅಧಿಕಾರ ವಹಿಸಿಕೊಂಡ ನಂತರ ಕೇಂದ್ರ ಸರ್ಕಾರ ತನ್ನ 2 ನೇ ಪೂರ್ಣ ಬಜೆಟ್ ಮಂಡನೆಯಾಗುತ್ತಿದ್ದು, ಹಣಕಾಸು ನಿರ್ಮಲಾ ಸೀತಾರಾಮನ್ ಅವರು ಸತತ 8 ನೇ ಬಾರಿಗೆ ಬಜೆಟ್ ಮಂಡಿಸುತ್ತಿದ್ದಾರೆ. ಈ ಬಜೆಟ್‌ನಲ್ಲಿ ಮಹಿಳೆಯರಿಗೆ ಕೇಂದ್ರ ಭರ್ಜರಿ ಶುಭ ಸುದ್ದಿ ನೀಡಿದೆ. ಉದ್ಯಮ ಕ್ಷೇತ್ರದಲ್ಲಿ ಮಹಿಳೆಯರ ಉತ್ತೇಜನಕ್ಕೆ ಹೊಸ ಯೋಜನೆ ಘೋಷಣೆ ಮಾಡಲಾಗುವುದು ಇದರಿಂದ 22 ಲಕ್ಷ ಮಹಿಳಾ ಉದ್ಯಮಿಗಳಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.ಕೇಂದ್ರ ಸರ್ಕಾರವು ಈ ಬಾರಿಯ ಬಜೆಟ್‌ನಲ್ಲಿ ಮಧ್ಯಮ, ಸಣ್ಣ ಹಾಗೂ ಅತಿ ಸಣ್ಣ ಕೈಗಾರಿಕಾ ವಲಯಕ್ಕೆ (ಎಂಎಸ್‌ಎಂಇ) ಭರ್ಜರಿ ಕೊಡುಗೆ ನೀಡಿದ್ದಾರೆ.
2025 -2026 ನೇ ಸಾಲಿನ ಬಜೆಟ್ ಮಂಡನೆ ಮಾಡಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಮೊದಲ ಬಾರಿ ಉದ್ಯಮ ಆರಂಭಿಸುವ ಎಸ್‌ಸಿ, ಎಸ್‌ಟಿ ಸಮುದಾಯದವರು ಹಾಗೂ ಮಹಿಳೆಯರಿಗೆ 2 ಕೋಟಿ ರೂಪಾಯಿವರೆಗೂ ಸಾಲ ನೀಡುವುದಾಗಿ ಘೋಷಣೆ ಮಾಡಲಾಗಿದೆ. ಎಂಎಸ್‌ಎಂಇ ವಲಯಕ್ಕೆ ಹೊಸ ಯೋಜನೆಗಳನ್ನು ಘೋಷಿಸಿದ್ದಾರೆ. 7.5 ಕೋಟಿ ಜನರಿಗೆ ಉದ್ಯೋಗ ನೀಡಿರುವ 1 ಕೋಟಿಗೂ ಹೆಚ್ಚು ಎಂಎಸ್‌ಎಂಇ ಈಗಿವೆ. ಸಾಲ ಸೌಲಭ್ಯವನ್ನು ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ.
ಸಣ್ಣ ಮತ್ತು ಅತಿ ಸಣ್ಣ ಉದ್ಯಮಗಳಿಗೆ ಸಾಲದ ಮಿತಿಯನ್ನು 5 ಕೋಟಿಯಿಂದ 10 ಕೋಟಿ ರೂಪಾಯಿಗಳಿಗೆ ಹೆಚ್ಚಿಸಲಾಗುವುದು. ಸ್ಟಾರ್ಟ್‌ಅಪ್‌ಗಳಿಗೂ ಸಹ 10 ಕೋಟಿ ರೂ.ವರೆಗೆ ಸಾಲ ಸಿಗಲಿದೆ. ಉತ್ತಮವಾಗಿ ನಡೆಯುತ್ತಿರುವ ರಫ್ತುದಾರ ಎಂಎಸ್‌ಎಂಇಗಳಿಗೆ 20 ಕೋಟಿ ರೂ.ಗಳವರೆಗೆ ದೀರ್ಘಾವಧಿ ಸಾಲಗಳು ನೀಡಲಾಗುವುದು ಎಂದು ನಿರ್ಮಲಾ ಸೀತಾರಾಮನ್ ಅವರು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

