ನವದೆಹಲಿ : 2025-26ನೇ ಸಾಲಿನ ಕೇಂದ್ರ ನರೇಂದ್ರ ಮೋದಿ ಸರ್ಕಾರವು ಬಜೆಟ್ ಮಾಡಿದೆ. ಈ ಬಾರಿಯೂ NDA ಮಿತ್ರ ಪಕ್ಷಗಳ ರಾಜ್ಯಗಳಿಗೆ ಮೋದಿ ಸರ್ಕಾರ ಬಜೆಟ್ನಲ್ಲಿ ಹೆಚ್ಚಿನ ಆದ್ಯತೆ ನೀಡಿದೆ ಎಂದು ವಿಪಕ್ಷಗಳು ಆರೋಪಿಸುತ್ತಿವೆ.
ವಿಷೇಶವಾಗಿ ಎನ್ಡಿಎ ಮಿತ್ರವಾಗಿರುವ ಜೆಡಿಯು ಪಕ್ಷದ ಬಿಹಾರಕ್ಕೆ ಹಾಗೂ ಟಿಡಿಪಿ ಇರುವ ಆಂಧ್ರಪ್ರದೇಶಕ್ಕೆ ಹೆಚ್ಚಿನ ಒತ್ತು ಬಜೆಟ್ನಲ್ಲಿ ನೀಡಲಾಗಿದೆ ಎಂದು ವಿಪಕ್ಷ ನಾಯಕರು ಆಕ್ರೋಶ ಹೊರಹಾಕುತ್ತಿದ್ದಾರೆ.
ಕಳೆದ ಬಾರಿಯಂತೆ ಈ ಬಾರಿಯೂ ಬಜೆಟ್ನಲ್ಲಿ ಬಿಜೆಪಿ (ಎನ್ಡಿಎ) ಕೂಟದ ರಾಜ್ಯಗಳಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಾಗಿದೆ. ಬಿಹಾರಕ್ಕೆ IIT ಪಾಟ್ನಾ ಸೇರಿ ಒಟ್ಟು 5 IIT ಅಭಿವೃದ್ಧಿಗೆ ಅನುದಾನವನ್ನು ಬಜೆಟ್ನಲ್ಲಿ ಮೀಸಲಿರಿಸಲಾಗಿದೆ. ಅಲ್ಲದೇ ಗ್ರೀನ್ ಫೀಲ್ಡ್ ವಿಮಾನ ನಿಲ್ದಾಣ ಮಂಜೂರು, ಬಿಹಾರದ 500 ಹೆಕ್ಟೇರ್ ಜಮೀನಿಗೆ ನೀರಾವರಿ ಯೋಜನೆಯನ್ನು ಅಭಿವೃದ್ಧಿಗಾಗಿ ಒತ್ತು ನೀಡಲಾಗಿದೆ.
ಅತ್ತ ಆಂಧ್ರಕ್ಕೂ ಬಜೆಟ್ಗೂ ಮುನ್ನವೇ ಈಗಾಗಲೇ ವಿಶಾಖಪಟ್ಟಣಂನಲ್ಲಿ ರಾಷ್ಟ್ರೀಯ ಉಕ್ಕು ಕಾರ್ಖಾನೆ ಪುನಶ್ಚೇತನಕ್ಕೆ ಬರೋಬ್ಬರಿ ರೂ.11,400 ಕೋಟಿ ಘೋಷಣೆ ಮಾಡಲಾಗಿತ್ತು.
ಕೇಂದ್ರ ಸರ್ಕಾರ ತನ್ನ ಮಿತ್ರಪಕ್ಷಗಳಿರುವ ರಾಜ್ಯಗಳಿಗೆ ಬಜೆಟ್ನಲ್ಲಿ ಬಂಪರ್ ಗಿಫ್ಟ್ ಘೋಷಣೆ ಬೆನ್ನಲ್ಲೇ ಸಂಸತ್ತಿನಲ್ಲಿ ವಿರೋಧ ಪಕ್ಷದ ನಾಯಕರು ಆಕ್ಷೇಪ ವ್ಯಕ್ತಪಡಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

