Breaking News

ರಾಜ್ಯದ ರೈತರಿಗೆ ಸಿಹಿಸುದ್ದಿ: ಹಗಲಿನಲ್ಲಿ ಕೃಷಿ ಪಂಪ್‌ಸೆಟ್ ಗಳಿಗೆ ಉಚಿತ ವಿದ್ಯುತ್ ನೀಡಲು ಸೋಲಾರ್ ಪಾರ್ಕ್ ಸ್ಥಾಪನೆ

ಬೆಂಗಳೂರು : ರಾಜ್ಯ ಸರ್ಕಾರವು ರೈತರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ರೈತರ ಕೃಷಿ ಪಂಪ್ ಸೆಟ್ ಗಳಿಗೆ ಹಗಲು ಹೊತ್ತಿನಲ್ಲಿ ಉಚಿತ ವಿದ್ಯುತ್ ನೀಡಲು ಸೋಲಾರ್ ಪಾರ್ಕ್ ಸ್ಥಾಪಿಸಲಾಗುತ್ತಿದೆ.
ರಾಜ್ಯದ ರೈತರ ಕೃಷಿ ಮತ್ತು ನೀರಾವರಿ ಪಂಪ್‌ಸೆಟ್‌ಗಳಿಗೆ ವಿದ್ಯುತ್ ಕೊರತೆ ನೀಗಿಸುವ ನಿಟ್ಟಿನಲ್ಲಿ ಕುಸುಮ ಯೋಜನೆ ರೈತರಿಗೆ ವರದಾನವಾಗಲಿದೆ.
ರೈತರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಕುಸುಮ್ ಬಿ ಮತ್ತು ಸಿ. ಯೋಜನೆಗೆ ರಾಜ್ಯದಲ್ಲಿ ಈಗಾಗಲೇ ಚಾಲನೆ ನೀಡಲಾಗಿದ್ದು, ಈ ಯೋಜನೆಯಿಂದಾಗಿ ರೈತರಿಗೆ ತಮ್ಮ ಕೃಷಿ ಮತ್ತು ನೀರಾವರಿ ಪಂಪ್‌ಸೆಟ್‌ಗಳಿಗೆ ಹಗಲಿನಲ್ಲಿ 7 ಗಂಟೆಗಳ ಕಾಲ ನಿರಂತರ ಗುಣಮಟ್ಟದ ವಿದ್ಯುತ್ ಉಚಿತವಾಗಿ ದೊರೆಯಲಿದೆ.
ಈ ಯೋಜನೆಯಿಂದ ರೈತರಿಗೆ ರಾತ್ರಿಯ ಜೊತೆಗೆ ಹಗಲಿನಲ್ಲಿಯೂ ಉತ್ತಮ ವಿದ್ಯುತ್ ದೊರೆಯಲಿದ್ದು, ಇನ್ನು ಮುಂದೆ ನಿದ್ದೆಗೆಟ್ಟು ನೀರಿಗಾಗಿ ಪರಿತಪಿಸುವುದು ತಪ್ಪಲಿದೆ. ಇದರ ಜೊತೆಗೆ ಹಗಲಿನಲ್ಲಿ ವಿದ್ಯುತ್‌ ಬೇಡಿಕೆಯ ಒತ್ತಡ ಕಡಿಮೆಯಾಗಿ, ಸಾರ್ವಜನಿಕ ಉದ್ದಿಮೆ ಹಾಗೂ ಸಣ್ಣಪುಟ್ಟ ಕೈಗಾರಿಕೆಗಳಿಗೆ. ನಗರ ಮತ್ತು ಗ್ರಾಮೀಣ ಮನೆಗಳಿಗೆ ಹಗಲು ಹೊತ್ತಿನಲ್ಲಿ ಗುಣಮಟ್ಟದ ವಿದ್ಯುತ್ ಲಭ್ಯವಾಗಲಿದೆ. ರಾತ್ರಿ ವೇಳೆಯ ವಿದ್ಯುತ್ ಬೇಡಿಕೆಗೂ ಒತ್ತಡ ತಗ್ಗಲಿದ್ದು, ಯಥಾ ರೀತಿ. ರಾತ್ರಿ ವೇಳೆಗೆ ನಿಗದಿಪಡಿಸಿದ ವಿದ್ಯುತ್ ಕೂಡ ವಿದ್ಯುತ್ ಫೀಡರ್‌ನಿಂದ ರೈತರಿಗೆ ಪೂರೈಕೆಯಾಗಲಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *