ಬೆಂಗಳೂರು : ಅಂಗನವಾಡಿ ನೌಕರರು ಪ್ರತಿಭಟನೆ ಕೈ ಬಿಟ್ಟ ಒಂದೆರೆಡು ದಿನದಲ್ಲಿ ಸರ್ಕಾರಕ್ಕೆ ದೊಡ್ಡ ತಲೆಬಿಸಿ ಶುರುವಾಗಿದೆ. ಇವತ್ತಿನಿಂದ ಆಶಾ ಕಾರ್ಯಕರ್ತೆಯರ ಮುಷ್ಕರ ಆರಂಭವಾಗಿದೆ.
ಇಂದು ರಾಜ್ಯದ ವಿವಿಧ ಭಾಗಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್ ಗೆ ಆಗಮಿಸುವ ಆಶಾ ಕಾರ್ಯಕರ್ತೆಯರು , ವೇತನ ಪರಿಷ್ಕರಣೆ ಸೇರಿದಂತೆ ತಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಒತ್ತಾಯಿಸಲಿದ್ದಾರೆ .
ಕೈ ಸರ್ಕಾರ ಅಸ್ತಿತ್ವಕ್ಕೆ ಬರುವ ಮುನ್ನ ಆಶಾ ಕಾರ್ಯಕರ್ತರ ಸಮಸ್ಯೆಗೆ ಸ್ಪಂದಿಸುವ ಭರವಸೆ ನೀಡಿತ್ತು.ಆದ್ರೆ ಈ ವರೆಗೂ ಆದ್ಯತೆ ಕೊಡದ ಹಿನ್ನೆಲೆ ಪ್ರತಿಭಟನೆ ತೀವ್ರ ಗೊಳಿಸಲಾಗುತ್ತಿದೆ. ಮಾಸಿಕ ಗೌರವಧನವನ್ನು 15 ಸಾವಿರಕ್ಕೆ ಏರಿಕೆ ಮಾಡಬೇಕು ಎಂದು ಆಶಾ ಕಾರ್ಯಕರ್ತೆಯರು ಬೇಡಿಕೆ ಇಟ್ಟಿದ್ದಾರೆ. ಇದಲ್ಲದೆ ಗುಣಮಟ್ಟದ ಟ್ಯಾಬ್ , ಅಗತ್ಯ ಭತ್ಯೆ ನೀಡುವಂತೆಯೂ ಬೇಡಿಕೆ ಸಲ್ಲಿಸಿದ್ದಾರೆ.
ಆಶಾ ಕಾರ್ಯಕರ್ತೆಯರು ದಿನನಿತ್ಯವೂ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಿದ್ದಾರೆ. ಹಾಗೇಯೇ, ತಮಗೆ ನ್ಯಾಯ ಸಿಗುವವರೆಗೂ ಫ್ರೀಡಂ ಪಾರ್ಕ್ ಜಾಗ ಬಿಟ್ಟು ಕದಲುವುದಿಲ್ಲ ಎಂದು ಪಟ್ಟನ್ನು ಹಿಡಿದಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

