Breaking News

ಪ್ರಸಕ್ತ ಸಾಲಿನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಗ್ರೇಸ್ ಮಾರ್ಕ್ಸ್ ರದ್ದು: ಸಚಿವ ಮಧು ಬಂಗಾರಪ್ಪ

ಬೆಂಗಳೂರು : ಪ್ರಸಕ್ತ ಸಾಲಿನ SSLC ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿ ಈ ಬಾರಿ ಯಾವುದೇ ಕಾರಣಕ್ಕೂ ಗ್ರೇಸ್ ಮಾರ್ಕ್ಸ್ (ಕೃಪಾಂಕ) ಕೊಡುವುದಿಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಕೋವಿಡ್ ಸಂದರ್ಭದಲ್ಲಿ ಕೊಟ್ಟಿದ್ದ 10% ಗ್ರೇಸ್ ಅಂಕ ರದ್ದುಗೊಳಿಸಲಾಗಿದೆ​​​ ಎಂದರು.
ಒಂದು ದಿನಕ್ಕೆ 1 ಅಂಕ ಎಂಬ ಕಾರ್ಯಕ್ರಮ ರೂಪಿಸಿದ್ದೇವೆ. ಮಕ್ಕಳಿಗೆ ಬೆಳಗ್ಗೆ ಫೋನ್ ಮಾಡಿ ಎಬ್ಬಿಸಿ ಓದಿಸುವ ಕಾರ್ಯಕ್ರಮ ಇದಾಗಿದೆ. ವಿಶೇಷ ತರಗತಿ ಮಾಡುವ ಮೂಲಕ ಮಕ್ಕಳಿಗೆ ಅಭ್ಯಾಸ ಮಾಡಿಸಲಾಗುತ್ತಿದೆ. ಹೀಗಾಗಿ ಕೃಪಾಂಕವನ್ನು ರದ್ದುಗೊಳಿಸಲಾಗಿದೆ ಎಂದು ಸ್ಪಷ್ಟನೆ ನೀಡಿದರು.
ಈ ಬಾರಿಯೂ ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಹಿಜಾಬ್ ಗಿಲ್ಲ ಅನುಮತಿ ಎಂಬ ವಿಚಾರವಾಗಿಯೂ ಪ್ರತಿಕ್ರಿಯೆ ನೀಡಿದ ಅವರು, ಹಿಜಾಬ್​​ ವಿವಾದವು ಸದ್ಯ ಕೋರ್ಟ್​​​ನಲ್ಲಿದೆ. ಇನ್ನೂ ಇತ್ಯರ್ಥವಾಗಿಲ್ಲ. ಆದ್ದರಿಂದ ಗೃಹಸಚಿವರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *