Breaking News

ಕಾಂಗ್ರೆಸ್ ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದೆ: ಬಿಜೆಪಿ

ಬೆಂಗಳೂರು : ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​​ ಸರ್ಕಾರದ ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದೆ ಎಂದಿರುವ ಬಿಜೆಪಿ, ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲೂ ಸಿಎಂ ಸಿದ್ದರಾಮಯ್ಯ ಸರ್ಕಾರದ ಬಳಿ ದುಡ್ಡಿಲ್ಲ ಎಂದು ಕುಟುಕಿದೆ.
ಈ ಕುರಿತು ಬಿಜೆಪಿ ಟ್ವೀಟಿಸಿದ್ದು, ಸರ್ಕಾರದ ಬೊಕ್ಕಸ ಖಾಲಿ ಆಗಿರುವ ಕಾರಣ ರಾಜ್ಯದ ಜನರನ್ನು ಕಾಂಗ್ರೆಸ್‌ ಸರ್ಕಾರ “ನಮ್ಮ ತೆರಿಗೆ ನಮ್ಮ ಹಕ್ಕು” ಎಂಬ ವಿಚಾರದಲ್ಲಿ ವ್ಯವಸ್ಥಿತವಾಗಿ ಎತ್ತಿಕಟ್ಟುತ್ತಿದೆ.
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್​​ ಸರ್ಕಾರದ ದುರಾಡಳಿತದಿಂದ ಸರ್ಕಾರದ ಬೊಕ್ಕಸ ಬರಿದಾಗಿದೆ. ಗ್ಯಾರಂಟಿ ಯೋಜನೆಗಳನ್ನು ಮುಂದುವರೆಸಲೂ ಸಿದ್ಧರಾಮಯ್ಯ ಸರ್ಕಾರದ ಬಳಿ ದುಡ್ಡಿಲ್ಲ.
ಸರ್ಕಾರ ಸಂಪೂರ್ಣ ದಿವಾಳಿಯಾಗಿರುವುದರಿಂದ ತೆರಿಗೆ ಹಣದಲ್ಲಾದರೂ ಉಸಿರಾಡುತ್ತೇವೆ ಎಂಬ ಉದ್ದೇಶವನ್ನು ಇಟ್ಟುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಮಸಲತ್ತು ನಡೆಸುತ್ತಿದೆ ಎಂದು ದೂರಿದರು.
ರಾಜ್ಯದಲ್ಲಿ ಎಲ್ಲಾ ದಿನೋಪಯೋಗಿ ವಸ್ತುಗಳ ಮೇಲೆ ತೆರಿಗೆ ಹೆಚ್ಚಳ ಮಾಡಿ , ಜನಸಾಮಾನ್ಯರ ರಕ್ತ ಹೀರುತ್ತಿರುವ ರಾಜ್ಯ ಸರ್ಕಾರದ ವಿರುದ್ಧ ಜನ ಈಗಾಗಲೇ ಧ್ವನಿ ಎತ್ತುತ್ತಿದ್ದಾರೆ. ಗ್ಯಾರಂಟಿ ಸರ್ಕಾರದಿಂದ ಬೆಲೆ ಏರಿಕೆ ಗ್ಯಾರಂಟಿ ಎಂಬಂತಾಗಿದೆ ಎಂದು ಕಮಲಪಡೆ ಟೀಕಿಸಿದೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *