Breaking News

ಪೊಲೀಸ್ ಠಾಣೆಯಲ್ಲಿ ಅಕ್ರಮ ಬಂಧನ: ಇನ್ಸ್‌ಪೆಕ್ಟರ್ ಗೆ 2 ಲಕ್ಷ ರೂ. ದಂಡ..

ದೂರುದಾರರ ಸಂಬಂಧಿಯನ್ನು ಪೊಲೀಸ್‌ ಠಾಣೆಯಲ್ಲಿ ಅಕ್ರಮವಾಗಿ ಇರಿಸಿಕೊಂಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಇನ್ಸೆಕ್ಟರ್ ಎ.ಡಿ…. ಅವರ ವಿರುದ್ಧ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಆರೋಪಿ ಇನ್ಸೆಕ್ಟರ್ ಎ.ಡಿ… ಅವರಿಂದ ಎರಡು ಲಕ್ಷ ರೂಪಾಯಿ ದಂಡ ವಸೂಲಿ ಮಾಡುವಂತೆ ರಾಜ್ಯ ಮಾನವ ಹಕ್ಕುಗಳ ಆಯೋಗ ಶಿಫಾರಸು ಮಾಡಿದೆ.
ಮಾನವ ಹಕ್ಕುಗಳ ಸಂರಕ್ಷಣಾ ಅಧಿನಿಯಮ 1993 ಕಲಂ 18 (ಇ) ಪ್ರಕಾರ ಶಿಫಾರಸು ಪ್ರತಿ ತಲುಪಿದ ಒಂದು ತಿಂಗಳ ಒಳಗಾಗಿ ಮುಖ್ಯ ಕಾರ್ಯದರ್ಶಿ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ಪೊಲೀಸ್ ಮಹಾ ನಿರ್ದೇಶಕರು ಅನುಪಾಲನಾ ವರದಿಯನ್ನು ಸಲ್ಲಿಸಬೇಕು ಎಂದು ಆಯೋಗದ ಸದಸ್ಯರಾದ ಎಸ್ ಕೆ ನಂಟಿಗೋಡಿ ಹೇಳಿದ್ದಾರೆ.

ಸಿಐಡಿಯಲ್ಲಿ ಸಿಸಿಎನ್ ಅಂಡ್ ಐ ವಿಭಾಗದಲ್ಲಿ… ಅವರು ಕೆಲಸ ಮಾಡುತ್ತಿದ್ದ ವೇಳೆ ದೂರುದಾರರ ಸಂಬಂಧಿ ಚ…. ಅವರನ್ನು ಅಕ್ರಮ ಬಂಧನದಲ್ಲಿ ಇಡಲಾಗಿತ್ತು…. ಅವರ ವಿರುದ್ಧ ಮಾನವ ಹಕ್ಕುಗಳ ಉಲ್ಲಂಘನೆ ಮಾಡಿದ್ದು ಮೇಲ್ನೋಟಕ್ಕೆ ಸಾಬೀತಾಗಿದೆ ಎಂದು ಆಯೋಗ ಮಾಹಿತಿ ನೀಡಿದೆ.
ಇನ್ಸೆಕ್ಟ‌ರ್ ಎ.ಡಿ…. ಅವರು ತಮ್ಮ ಕಾರ್ಯ ವ್ಯಾಪ್ತಿಯನ್ನು ಮೀರಿ ಅಧಿಕಾರ ದುರುಪಯೋಗ ಮಾಡಿಕೊಂಡಿರುವುದು ವಿಚಾರಣೆಯ ವೇಳೆ ಗೊತ್ತಾಗಿದೆ.
ಬಾಧಿತ ವ್ಯಕ್ತಿ ಹಾಗೂ ಅವರ ಬಳಿ ಇದ್ದ ಡಿಜಿಟ್ ಟ್ರ್ಯಾಕ್ ಮಿಷನ್‌ ಅನ್ನು ಬಲವಂತದಿಂದ ಜೀಪಿನಲ್ಲಿ ತೆಗೆದುಕೊಂಡು ಹೋಗಿ ಮಾನವ ಹಕ್ಕುಗಳನ್ನು ಉಲ್ಲಂಘನೆ ಮಾಡಿದ್ದಾರೆ ಎಂಬುದು ಆಯೋಗದ ವಿಚಾರಣೆಯಲ್ಲಿ ಸಾಬೀತಾಗಿದೆ ಎಂದು ಮಾನವ ಹಕ್ಕುಗಳ ಆಯೋಗದ ವರದಿ ಹೇಳಿದೆ.
ಚಂದ್ರಶೇಖರ ಹಾಗೂ ದೂರುದಾರ ರಾಜು ಅವರಿಗೆ ತಲಾ ಒಂದು ಲಕ್ಷ ರೂಪಾಯಿ ಮೊತ್ತವನ್ನು ಪರಿಹಾರವಾಗಿ ರಾಜ್ಯ ಸರಕಾರ ನೀಡಬೇಕು ಎಂದು ಆಯೋಗ ಹೇಳಿದೆ.
ಇಲಾಖೆ ವಿಚಾರಣೆ ನಡೆದ ಬಳಿಕ ಪರಿಹಾರವಾಗಿ ನೀಡಲಾದ ಎರಡು ಲಕ್ಷ ರೂಪಾಯಿ ಮೊತ್ತವನ್ನು ಇನ್ಸೆಕ್ಟ‌ರ್ ವೈಯಕ್ತಿಕವಾಗಿ ನೀಡಬೇಕು. ಹಾಗಾಗಿ, ಅವರ ವೇತನದಿಂದ ವಸೂಲಿ ಮಾಡಿಕೊಳ್ಳಬೇಕು ಎಂದು ಆಯೋಗವು ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದೆ.

Share News

About Shaikh BigTv

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *