ರಾಜ್ಯ ರಾಜಕಾರಣದಲ್ಲಿ ಸಿಎಂ ಬದಲಾವಣೆ ಚರ್ಚೆ ಜೋರಾಗಿದೆ, ಮತ್ತೊಂದೆಡೆ ಸಚಿವ ಸಂಪುಟಕ್ಕೆ ಮೇಸರ್ ಸರ್ಜರಿ ಆಗಲಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ. ಈ ನಡುವೆ ಗೃಹ ಸಚಿವ ಡಾ. ಜಿ. ಪರಮೇಶ್ವರ್ ಅವರು ರಾಜೀನಾಮೆ ನೀಡಲು ಸಿದ್ದ ಎನ್ನುವ ಹೇಳಿಕೆ ನೀಡಿರುವುದು ರಾಜ್ಯ ರಾಜಕಾರಣದಲ್ಲಿ ಸಾಕಷ್ಟು ಸಂಚಲನ ಮೂಡಿಸಿದೆ.ರಾಜೀನಾಮೆ ಕೊಡೋಕೆ ರೆಡಿ ಇದ್ದೀನಿತುಮಕೂರಿನಲ್ಲಿ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಪರಮೇಶ್ವರ್ ಅವರು, “ನೀವೆಲ್ಲ ಸೇರಿ ದೊಡ್ಡ ಮನಸ್ಸು ಮಾಡಿ ನನ್ನ ರಾಜೀನಾಮೆ ಕೇಳಿದ್ರೆ ಕೊಡೋಕೆ ರೆಡಿ ಇದ್ದೀನಿ” ಎಂದು ಹೇಳುವ ಮೂಲಕ ಕಾರ್ಯಕರ್ತರಿಗೆ ಶಾಕ್ ನೀಡಿದ್ದಾರೆ.ಕಾರ್ಯಕರ್ತರ ಮನದಾಳಕ್ಕೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲಸಿಎಂ ಮತ್ತು ಕೆಪಿಸಿಸಿ ಬದಲಾವಣೆ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ಗೃಹ ಸಚಿವರ ಈ ಹೇಳಿಕೆ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸಿದೆ. ಕೊರಟಗೆರೆ ರಾಜೀವ್ ಭವನದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಕಾರ್ಯಕರ್ತರ ಮನದಾಳಕ್ಕೆ ಸ್ಪಂದಿಸಲು ಸಾಧ್ಯವಾಗುತ್ತಿಲ್ಲ ಎಂಬ ಬೇಸರ ವ್ಯಕ್ತಪಡಿಸಿದರು.ಕಾರ್ಯಕರ್ತರಿಗೆ ಕ್ಷಮೆ ಕೇಳಿದ ಪರಮೇಶ್ವರ್”ಇತ್ತೀಚೆಗೆ ಕ್ಷೇತ್ರದ ಕಾರ್ಯಕರ್ತರ ಜೊತೆ ಬೆರೆಯಲು ಸಾಧ್ಯವಾಗುತ್ತಿಲ್ಲ. ನಿಮ್ಮ ಮನಸ್ಸಿನ ಆಕಾಂಕ್ಷೆಯಂತೆ ಸ್ಪಂದಿಸಲು ಆಗ್ತಿಲ್ಲ, ಇದಕ್ಕಾಗಿ ಕ್ಷಮೆ ಕೇಳ್ತೀನಿ. ನೀವು ಹೇಳಿದರೆ ಗೃಹ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧ” ಎಂದು ಹೇಳಿದ್ದಾರೆ.ದಯವಿಟ್ಟು ತಕ್ಷಣ ರಾಜೀನಾಮೆ ಕೊಡಬೇಡಿಪರಮೇಶ್ವರ್ ಅವರ ಈ ಹೇಳಿಕೆಯಿಂದ ಕಾರ್ಯಕರ್ತರು ಮತ್ತು ಮುಖಂಡರು ವಿಚಲಿತರಾದರು. “ದಯವಿಟ್ಟು ತಕ್ಷಣ ರಾಜೀನಾಮೆ ಕೊಡಬೇಡಿ” ಎಂದು ಕಾರ್ಯಕರ್ತರು ಕೂಗಿ ಪರಮೇಶ್ವರ್ ಅವರನ್ನು ತಡೆದರು.ಪಕ್ಷದಲ್ಲಿ

ಈಗ ಬೇರೆಯವರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆಕರ್ನಾಟಕದಲ್ಲಿ ಮುಖ್ಯಮಂತ್ರಿ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಚಚೆ ನಡುವೆ ಇತ್ತೀಚೆಗೆ ಹೈಕಮಾಂಡ್ ಕರೆ ಮೇರೆಗೆ ದೆಹಲಿಗೆ ತೆರಳಿದ್ದ ರಾಜ್ಯ ಗೃಹ ಸಚಿವ ಜಿ.ಪಮರೇಶ್ವರ ಅವರು ಮಹತ್ವದ ವಿಷಯಗಳನ್ನು ಚರ್ಚಿಸಿದ್ದಾರೆ. ಪಕ್ಷದಲ್ಲಿ ಈಗ ಬೇರೆಯವರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ ಎಂದು ಹಲವು ವಿಷಯಗಳನ್ನು ವರಿಷ್ಠರ ಗಮನಕ್ಕೆ ತಂದಿದ್ದಾರೆ. ಇದಕ್ಕೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಸಕಾರಾತ್ಮಕ ಸ್ಪಂದನೆ ವ್ಯಕ್ತಪಡಿಸಿದ್ದಾರೆ.ದಲಿತ ಸಮುದಾಯ ನಾಯಕರಿಗೆ ಮನ್ನಣೆ ನೀಡಬೇಕುದೆಹಲಿ ತೆರಳಿ ಗೃಹ ಸಚಿವರು, ನೇರವಾಗಿ ಕೆ.ಸಿ. ವೇಣುಗೋಪಾಲ್ ಅವರನ್ನು ಭೇಟಿ ಮಾಡಿದ್ದಾರೆ. ನಾನು 2010ರಿಂದ 2018ರವರೆಗೆ ಕೆಪಿಸಿಸಿ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. ಪಕ್ಷ ಸಂಘಟನೆಗಾಗಿ ಅಧಿಕಾರವನ್ನು ತ್ಯಜಿಸಿದ್ದೇನೆ. ಸಚಿವ ಸ್ಥಾನ ಬಿಟ್ಟು ಕೊಟ್ಟಿದ್ದೇನೆ. ಪಕ್ಷದ ನಿಯಮವಾದ ಒಬ್ಬರಿಗೆ ಒಂದೇ ಹುದ್ದೆ ಎಂಬುದಕ್ಕೆ ನಾನು ಬದ್ಧವಾಗಿದ್ದುಕೊಂಡು ಗೌರವ ಕೊಟ್ಟಿದ್ದೇನೆ. ಈಗ ಪಕ್ಷದಲ್ಲಿ ಬೇರೆಯವರಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಲಾಗುತ್ತಿದೆ. ಎಸ್‌ಸಿ ಸಮುದಾಯದ ನಾಯಕರನ್ನು ಪಕ್ಷದಲ್ಲಿ ಕಡೆಗಣಿಸುತ್ತಿದ್ದಾರೆ ಎಂಬ ಬಗ್ಗೆ ಸಮುದಾಯದ ತಳಮಟ್ಟದಲ್ಲಿ ಚರ್ಚೆಯಾಗುತ್ತಿದೆ ಎಂದು ಅವರು ರಾಜ್ಯದ ರಾಜಕೀಯ ಬೆಳವಣಿಗೆ ಬಗ್ಗೆ ವಿವರಿಸಿದ್ದಾರೆ. ಜೊತೆಗೆ ದಲಿತ ಸಮುದಾಯ ನಾಯಕರಿಗೆ ಮನ್ನಣೆ ನೀಡುವಂತೆ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.