ಭಾರತೀಯ ಪಶುಪಾಲನ್ ನಿಗಮ್ ಲಿಮಿಟೆಡ್ (BPNL) ಜಾನುವಾರು ಸಾಕಣೆ ಹೂಡಿಕೆ ಅಧಿಕಾರಿ, ಜಾನುವಾರು ಸಾಕಣೆ ಹೂಡಿಕೆ ಸಹಾಯಕ ಮತ್ತು ಜಾನುವಾರು ಸಾಕಣೆ ಕಾರ್ಯಾಚರಣೆ ಸಹಾಯಕ ಸೇರಿದಂತೆ ವಿವಿಧ ಹುದ್ದೆಗಳಲ್ಲಿ 2,152 ಹುದ್ದೆಗಳಿಗೆ ನೇಮಕಾತಿಯನ್ನು ಪ್ರಕಟಿಸಿದೆ.
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅಧಿಕೃತ ವೆಬ್‌ಸೈಟ್ bharatiyapashupalan.com ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು ಮಾರ್ಚ್ 12, 2025 ರವರೆಗೆ ಕೊನೆಯ ದಿನಾಂಕ ನಿಗದಿಪಡಿಸಿದೆ.ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಲಸಕ್ಕೆ ತಕ್ಕಂತೆ ಮಾಸಿಕ 20,000 ದಿಂದ 38,200 ವರೆಗೆ ವೇತನ ನೀಡಲಾಗುತ್ತದೆ. ವಿದ್ಯಾರ್ಹತೆ SSLC ಹಾಗೂ PUC ಆಗಿದ್ದು, ಬಿಪಿಎನ್‌ಎಲ್ ನೇಮಕಾತಿ ಆಯ್ಕೆ ಪ್ರಕ್ರಿಯೆಯು ಆನ್‌ಲೈನ್ ಪರೀಕ್ಷೆಯನ್ನು ಒಳಗೊಂಡಿರುತ್ತದೆ. ಪರೀಕ್ಷೆಯಲ್ಲಿ ಅರ್ಹತೆ ಪಡೆದ ಅಭ್ಯರ್ಥಿಗಳನ್ನು ಸಂದರ್ಶನ ಸುತ್ತಿಗೆ ಕರೆಯಲಾಗುವುದು. ಇದರ ನಂತರ ದಾಖಲೆ ಪರಿಶೀಲನೆ ಮತ್ತು ಒಂದು ದಿನದ ತರಬೇತಿ ಅವಧಿಯನ್ನು ನಡೆಸಲಾಗುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news





