ಗೃಹಲಕ್ಷ್ಮಿಯರಿಗೆ ಗುಡ್ ನ್ಯೂಸ್ ಕೊಟ್ಟ ಲಕ್ಷ್ಮಿ ಹೆಬ್ಬಾಳ್ಕರ್: ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಎರಡು ತಿಂಗಳ ಬಾಕಿ ಹಣ ಬಿಡುಗಡೆಯಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದ್ದಾರೆ.
ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳನ್ನು ಕಡಿಮೆ ಮಾಡುವ ಯೋಚನೆ ಯೋಜನೆ ನಮ್ಮದಲ್ಲ. ಈ ಬಗ್ಗೆ ಸಾರ್ವಜನಿಕರು ಗೊಂದಲ ಪಡುವುದು ಬೇಡ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ 5 ವರ್ಷವೂ ಹಣ ತಲುಪಲಿದೆ ಎಂದು ನೇರವಾಗಿ ಸ್ಪಷ್ಟ ಪಡಿಸಿದ್ದಾರೆ. ತಾಂತ್ರಿಕ ಸಮಸ್ಯೆಗಳಿಂದ ಉಂಟಾದ ತೊಂದರೆಯಿಂದ ತಡವಾದ 2 ತಿಂಗಳ ಯೋಜನೆ ಹಣವನ್ನು ಒಟ್ಟಿಗೆ ನೀಡುವುದಾಗಿ ತಿಳಿಸಿದ್ದಾರೆ. ಇನ್ನು 3 ದಿನಗಲ್ಲಿ ಗೃಹಲಕ್ಷ್ಮಿ ಹಣ ಬಿಡುಗಡೆಯಾಗುವುದಾಗಿ ತಿಳಿಸಿದ್ದಾರೆ. ಗ್ಯಾರಂಟಿ ಯೋಜನೆಗಳು ಇರುವುದೇ ಬಡವರಿಗಾಗಿ ಯಾವುದೇ ಕಾರಣಕ್ಕೂ ಐದು ಗ್ಯಾರಂಟಿಗಳನ್ನು ನಿಲ್ಲಿಸುವುದಿಲ್ಲ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

