ಹುಬ್ಬಳ್ಳಿಯ ವಾಯುವ್ಯ ಸಾರಿಗೆ ಸಂಸ್ಥೆ ಹೊಸೂರ್ ಪ್ರಾದೇಶಿಕ ಬಸ್ ನಿಲ್ದಾಣದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ವಾಯು ಸಾರಿಗೆ ಸಂಸ್ಥೆಯ ಸಿಬ್ಬಂದಿ ವರ್ಗದಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಗುರುವಾರ ಆಯೋಜಿಸಲಾಗಿತ್ತು. ಡಾಕ್ಟರ್ ಎಸ್. ಎಫ್ ಕಮ್ಮಾರ್ ರವರು ಕಾರ್ಯಕ್ರಮವನ್ನು ಉದ್ಘಾಟಿಸುವ ಮೂಲಕ ಶಿಬಿರವನ್ನು ಪ್ರಾರಂಭಿಸಲಾಯಿತು “ರಕ್ತದಾನ ಮಹಾದಾನ” ರಕ್ತದಾನ ಮಾಡುವುದರಿಂದ ಯಾವುದೇ ತೊಂದರೆ ಆಗುವುದಿಲ್ಲ,ಬದಲಿಗೆ ಒಂದು ಜೀವ ಉಳಿಸಿದಂತಾಗುತ್ತದೆ. ರಕ್ತದಾನ ಮಾಡುವುದರಿಂದ ಅಶಕ್ತ ವಾಗುವುದಿಲ್ಲ ಪ್ರತಿ ಮೂರು ತಿಂಗಳಿಗೊಮ್ಮೆ ರಕ್ತದಾನ ಮಾಡಬಹುದಾಗಿದೆ ಎಂದು ತಿಳಿಸಿದರು. ಸಂಸ್ಥೆಯ 116 ಸಿಬ್ಬಂದಿಯವರು ರಕ್ತದಾನ ಮಾಡಿದರು. ಹತ್ತಕ್ಕಿಂತ ಹೆಚ್ಚು ಬಾರಿ ರಕ್ತದಾನ ಮಾಡಿದ 11 ಸಾರಿಗೆ ಸಿಬ್ಬಂದಿಯವರನ್ನು ಸನ್ಮಾನಿಸಲಾಯಿತು.
bigtvnews | Hubli Dharwad News | Kannada News | Karnataka News Hubli News | News In Hubli | Local news





