ರಾಜ್ಯದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯ ನಡೆದಿದೆ. ಇಬ್ಬರು ಮಕ್ಕಳ ತಂದೆಯಾದವನು ಅಪ್ರಾಪ್ತ ಬಾಲಕಿಯೊಬ್ಬಳನ್ನು ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರವೆಸಗಿ ಆಕೆಯನ್ನು ಗರ್ಭವತಿಯನ್ನಾಗಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.ಬಸಪ್ಪ ಅಡಿವೆಪ್ಪ ಎಂಬಾತ ಬಾಲಕಿಯನ್ನು ನಂಬಿಸಿ ಕರೆದೊಯ್ದು ನೀಚ ಕೃತ್ಯವೆಸಗಿದ್ದಾನೆ. ಸಂತ್ರಸ್ತೆ ಪೋಷಕರು ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿಗೆ ಇಬ್ಬರು ಮಕ್ಕಳಿದ್ದು, ಅಪ್ರಾಪ್ತೆಯನ್ನು ಪುಸಲಾಯಿಸಿ ನಿರಂತರವಾಗಿ ಅತ್ಯಾಚಾರವೆಸಗಿ ಆಕೆಯನ್ನು 8 ತಿಂಗಳ ಗರ್ಭಿಣಿಯನ್ನಾಗಿ ಮಾಡಿದ್ದಾನೆ. ಆರೋಪಿ ಬಂಧಿಸಿರುವ ಪೊಲೀಸರು ತನಿಖೆ ನಡೆಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

