ಪಾಕಿಸ್ತಾನದಲ್ಲಿ ಮತ್ತೊಮ್ಮೆ ಉಗ್ರರು ಅಟ್ಟಹಾಸ ಮೆರೆದಿದ್ದಾರೆ. ನೈಋತ್ಯ ಪಾಕಿಸ್ತಾನದಲ್ಲಿ ಮಂಗಳವಾರ 400ಕ್ಕೂ ಹೆಚ್ಚು ಪ್ರಯಾಣಿಕರಿದ್ದ ರೈಲಿನ ಮೇಲೆ ದಾಳಿ ಮಾಡಿದ್ದು ಒತ್ತೆಯಿರಿಸಿಕೊಂಡಿದ್ದಾರೆ. ಮಿಲಿಟರಿ ಗ್ರೂಪ್ ಬಲೂಚ್ ಲಿಬರೇಶನ್ ಆರ್ಮಿ ಈ ದಾಳಿ ಮಾಡಿರುವುದಾಗಿ ಹೇಳಿದ್ದು, ತಮ್ಮ ಬೇಡಿಕೆಗಳನ್ನು ಈಡೇರಿಸದೇ ಇದ್ದರೆ ಒತ್ತೆಯಾಳುಗಳನ್ನು ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದೆ ಎಂದು ರಾಯಿಟರ್ಸ್ ವರದಿ ಮಾಡಿದೆ. ರೈಲಿನಲ್ಲಿದ್ದ 450ಕ್ಕೂ ಹೆಚ್ಚಿನ ಪ್ರಯಾಣಿಕರನ್ನು ಉಗ್ರಗಾಮಿಗಳು ಒತ್ತೆಯಾಳುಗಳಾಗಿ ಇಟ್ಟುಕೊಂಡಿದ್ದಾರೆ ಎಂದು ಕ್ವೆಟ್ಟಾದ ಹಿರಿಯ ರೈಲ್ವೆ ಸರ್ಕಾರಿ ಅಧಿಕಾರಿ ಮುಹಮ್ಮದ್ ಕಾಶಿಫ್ ಎಎಫ್‌ಪಿಗೆ ತಿಳಿಸಿದ್ದಾರೆ. ಪ್ರಯಾಣಿಕರಲ್ಲಿ ಮಹಿಳೆಯರು ಮತ್ತು ಮಕ್ಕಳು ಕೂಡ ಇದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

