Breaking News
Oplus_131072

ವಿಜಯಪುರದಲ್ಲಿ ಚಿರತೆ ಅಟ್ಟಹಾಸ ನಾಲ್ವರ ಮೇಲೆ ದಾಳಿ. ಕೊನೆಗೂ ಚಿರತೆ ಸೆರೆಗೆ..

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಮಣಂಕಲಗಿ ಗ್ರಾಮದಲ್ಲಿ ನಾಲ್ವರ ಮೇಲೆ ಚಿರತೆಯೊಂದು ದಾಳಿ ಮಾಡಿದೆ. ಇದರ ಬೆನ್ನಲ್ಲೇ ಪೊಲೀಸರು ಮತ್ತು ಅರಣ್ಯ ಇಲಾಖೆಯ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ, ಸ್ಥಳೀಯರ ನೆರವಿನೊಂದಿಗೆ ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಸ್ಥಳಕ್ಕೆ ಝಳಕಿ ಪಿಎಸ್‌ಐ ಎಸ್.ಬಿ.ಪಾಟೀಲ ಮತ್ತು ಸಿಬ್ಬಂದಿ ಹಾಗೂ ಅರಣ್ಯಾಧಿಕಾರಿಗಳು ದೌಡಾಯಿಸಿ ಬರಡೋಲ ಮತ್ತು ಹಲಸಂಗಿ ಗ್ರಾಮದ ಗೊಲ್ಲರ ಸಹಾಯದಿಂದ ಚಿರತೆ ಹಿಡಿಯುವ ಕಾರ್ಯಾಚರಣೆ ಕೈಗೊಂಡರು. ಸುಮಾರು ನಾಲ್ಕೈದು ಗಂಟೆಗಳ ಹರಸಹಾಸ ಪಟ್ಟು ಚಿರತೆಯನ್ನು ಸೆರೆ ಹಿಡಿದಿದ್ದಾರೆ. ಚಿರತೆ ದಾಳಿಯಲ್ಲಿ ಕಲ್ಲಪ್ಪ, ಸಂತೋಷ, ಈರಣ್ಣ, ಮಾದೇವ ಎಂಬುವರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ.

Share News

About BigTv News

Check Also

ರಾಯಚೂರಿನಲ್ಲಿ ದಂಪತಿ ಸೇರಿ ನಾಲ್ವರು ಸಾವು; ಪತ್ನಿ, ಮಕ್ಕಳನ್ನು ಕೊಂದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ!

ರಾಯಚೂರು: ವೈಯಕ್ತಿಕ ವ್ಯವಹಾರದಲ್ಲಿ ಭಾರಿ ನಷ್ಟ ಉಂಟಾದ ಹಿನ್ನೆಲೆಯಲ್ಲಿ ಪತಿಯೇ ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಉಸಿರುಗಟ್ಟಿಸಿ ಕೊಲೆ ಮಾಡಿ, …

Leave a Reply

Your email address will not be published. Required fields are marked *