ಕನ್ನಡ ಚಿತ್ರರಂಗದ ಖ್ಯಾತ ನಟಿ ಶುಭ ಪೂಂಜಾ ತಾಯಿ ವಿಧಿವಶರಾಗಿದ್ದಾರೆ. ನ್ಯುಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದ ಪೂಂಜಾ ತಾಯಿ ಅವರ ಶ್ವಾಸಕೋಶದಲ್ಲಿ ನೀರು ತುಂಬಿದ್ದ ಕಾರಣ ಆರೋಗ್ಯದಲ್ಲಿ ಏರುಪೇರಾಗಿತ್ತು ಎನ್ನಲಾಗಿದೆ. ಕಳೆದ ನಾಲ್ಕು ತಿಂಗಳಿನಿಂದ ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಶುಭ ಪೂಂಜಾ ತಾಯಿ, ಮಾರ್ಚ್ 6ರಂದು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 70 ವರ್ಷ ವಯಸ್ಸಾಗಿತ್ತು.ನನ್ನ ತಾಯಿ ಜೊತೆ ನನ್ನ ನಗುವೂ ಕಳೆದು ಹೋಗಿದೆ ಎಂದು ನಟಿ ಶುಭ ಪೂಂಜಾ ನೋವಿನ ಪೋಸ್ಟ್ ಹಂಚಿಕೊಂಡಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

