Breaking News

ಅನಾಥಾಶ್ರಮದಲ್ಲಿ ಊಟ ಸೇವಿಸಿದ 29 ವಿದ್ಯಾರ್ಥಿಗಳು ಅಸ್ವಸ್ಥ,ಓರ್ವ ವಿದ್ಯಾರ್ಥಿ ಸಾವು.

ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಟಿ.ಕಾಗೇಪುರ ಗ್ರಾಮದಲ್ಲಿ ಆಘಾತಕಾರಿ ಘಟನೆ ಸಂಭವಿಸಿದ್ದು, ಅನಾಥಾಶ್ರಮದಲ್ಲಿ ಊಟ ಸೇವಿಸಿದ ವಿದ್ಯಾರ್ಥಿಗಳಿಗೆ ಫುಡ್ ಪಾಯ್ಸನಿಂಗ್ ಆಗಿದೆ. ವಿಷ ಪ್ರಾಶನದ ಪರಿಣಾಮ 6ನೇ ತರಗತಿಯ ವಿದ್ಯಾರ್ಥಿ ಕೆರ್ಲಾಂಗ್ ಸಾವನ್ನಪ್ಪಿದ್ದು, 29 ಮಕ್ಕಳು ಅಸ್ವಸ್ಥರಾಗಿದ್ದಾರೆ.ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಫುಡ್ ಪಾಯ್ಸನಿಂಗ್ ಕುರಿತು ಪ್ರಕರಣ ದಾಖಲಿಸಲಾಗಿದೆ. ಘಟನೆಯ ಪೂರ್ಣ ಮಾಹಿತಿ ಸಂಗ್ರಹಿಸಲು ಆರೋಗ್ಯ ಇಲಾಖೆ ಮತ್ತು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *