Breaking News

ಬೆಂಗಳೂರಲ್ಲಿ ವೃದ್ಧ ಅತ್ತೆ-ಮಾವನ ಮೇಲೆ ಹಲ್ಲೆ ಪ್ರಕರಣ. ವಿಕ್ಟೊರಿಯ ಆಸ್ಪತ್ರೆಯಲ್ಲಿ ದಾಖಲು.

ವಿಕ್ಟೋರಿಯಾ ಆಸ್ಪತ್ರೆ ವೈದ್ಯಾಧಿಕಾರಿ ಪ್ರಿಯದರ್ಶಿನಿ ಎನ್ ಗೆ ಶೋಕಾಶ್ ನೋಟಿಸ್ ನೀಡಲಾಗಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ. ಪ್ರಿಯದರ್ಶನಿಗೆ ನೋಟಿಸ್ ಜಾರಿ ಮಾಡಲಾಗಿದೆ. ಮೊಹಮ್ಮದ್ ಮೊಹ್ಸಿನ್ ಸೂಚನೆಯ ಮೇರೆಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆ ನೋಟಿಸ್ ಗೆ ಲಿಖಿತ ಉತ್ತರ ನೀಡುವಂತೆ ಪ್ರಿಯದರ್ಶಿನಿ ಎನ್ ಗೆ ಸೂಚಿಸಲಾಗಿದೆ.ತಪ್ಪಿದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ನೋಟಿಸ್ ನಲ್ಲಿ ಎಚ್ಚರಿಕೆ ನೀಡಲಾಗಿದೆ. ಪ್ರಿಯ ದರ್ಶಿನಿ ಹಾಗೂ ಆಕೆಯ ಮಕ್ಕಳು ಬಂದು ಹಲ್ಲೆ ಮಾಡಿದ್ದು, ಪ್ರಾಣ ಬೆದ ರಿಕೆ ಹಾಕಿದ್ದಾರೆ ಎಂದು ಆರೋಪಿಸಿ ದ್ದಾರೆ. ಅನ್ನಪೂರ್ಣೇಶ್ವರಿನಗರ ಪೊಲಿಸರು ವಿಚಾರಣೆಗೆ ಹಾಜರಾಗುವಂತೆ ಆಕೆಗೆ ನೋಟಿಸ್ ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Share News

About BigTv News

Check Also

ಬೆಂಗಳೂರು: ಪಬ್‌ನಲ್ಲಿ ಲೈಟರ್ ಕೇಳಿ ಪರಿಚಯವಾದ ರಾಜಸ್ಥಾನದ ಯುವತಿಯ ಹೋಟೆಲ್‌ಗೆ ಕರೆದೊಯ್ದು ಅತ್ಯಾಚಾರ ಎಸಗಿದ ಆರೋಪಿಯ ಬಂಧನ

ಬೆಂಗಳೂರು: ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಬಂದಿದ್ದ ಯುವತಿಯೊಬ್ಬರಿಗೆ ಕೋರಮಂಗಲದ ಪಬ್‌ನಲ್ಲಿ ಸಮೀರ್ ಎಂಬಾತ ಪರಿಚಯವಾಗಿದ್ದಾನೆ. ಸಿಗರೇಟ್ ಸೇದಲು ಲೈಟರ್ ಕೇಳಿದಾಗ …

Leave a Reply

Your email address will not be published. Required fields are marked *