ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕಿನ ದರೋಜಿ ಗುಡ್ಡದಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡಿದ್ದು, ಧಗಧಗಿಸಿ ಹೊತ್ತಿ ಉರಿಯುತ್ತಿದೆ.400ಕ್ಕೂ ಹೆಚ್ಚು ಕರಡಿಗಳು ಸೇರಿದಂತೆ ವಿವಿಧ ಅಪರೂಪದ ವನ್ಯ ಜೀವಿಗಳ ಹಾಗೂ ಪಕ್ಷಿಗಳ ವಾಸಸ್ಥಾನಗಳಲ್ಲಿ ದರೋಜಿ ಗುಡ್ಡವೂ ಒಂದಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿ, ಸಿಬ್ಬಂದಿಗಳು ಆಗಮಿಸಿ, ಬೆಂಕಿ ನಂದಿಸೋ ಕಾರ್ಯದಲ್ಲಿ ತೊಡಗಿದ್ದಾರೆ.ಸದ್ಯ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಯಾವುದೇ ವನ್ಯಜೀವಿಗಳ ಪ್ರಾಣಹಾನಿಯಾಗಿಲ್ಲ ಎಂಬುದಾಗಿ ಹೇಳಲಾಗುತ್ತಿದೆ.
Oplus_131072
bigtvnews | Hubli Dharwad News | Kannada News | Karnataka News Hubli News | News In Hubli | Local news

